ಬೆಂಗಳೂರು,ಆ.14- ನಟ ದರ್ಶನ್ ಅವರನ್ನು ಹೊಸಕೆರೆ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯ ಹಾಗೂ ಬಸವೇಶ್ವರ ನಗರ ಠಾಣೆ ಪೊಲೀಸ್ ಜಂಟಿ ಕಾರ್ಯಾಚರಣೆ ಮಾಡಿ, ಬಂಧಿಸಿದ್ದಾರೆ. ಹೊಸಕೆರೆ ಹಳ್ಳಿಯಲ್ಲಿರುವ ವಿಜಯಲಕ್ಷ್ಮೀ ಅವರು ವಾಸವಿದ್ದ ಅಪಾರ್ಟ್ಮೆಂಟ್ ನಲ್ಲಿಯೇ ಬಂಧಿಸಿದ್ದಾರೆ.
ಅಪಾರ್ಟ್ಮೆಂಟ್ ಬಳಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು ಕೂಡ ಸುರಕ್ಷಿತವಾಗಿ ದರ್ಶನ್ ಅವರನ್ನು ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಬಂದಾಗಿನಿಂದಲೂ ಪೊಲೀಸರು ಮಪ್ತಿಯಲ್ಲಿ ತಿರುಗುತ್ತಿದ್ದರು. ಸದ್ಯ ದರ್ಶನ್ ಅವರನ್ನು ಬಂಧಿಸಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ದರ್ಶನ್ ಸೇರಿದಂತೆ 7 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.