ಬೆಂಗಳೂರು, ಜು.18- ಮನೆಯಿಂದ ಊಟ, ಪುಸ್ತಕಗಳು ಮತ್ತು ಹಾಸಿಗೆ, ದಿಂಬು ನೀಡುವಂತೆ ನ್ಯಾಯಾಲಯ ಅನುಮತಿ ನೀಡಬೇಕೆಂದು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ.
ಜೈಲು ಊಟ ಒಗ್ಗದೆ ಫುಡ್ ಪಾಯ್ಸಿನ್‌ನಿಂದ ದರ್ಶನ್ ಅವರು ತೂಕ ಕಳೆದುಕೊಂಡಿದ್ದಾರೆ. ಹೀಗಾಗಿ ಮನೆ ಊಟಕ್ಕೆ ಅನುಮತಿ ನೀಡಬೇಕೆಂದು ದರ್ಶನ್ ಪರ ವಕೀಲರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿತು.
ಮನೆ ಊಟಕ್ಕೆ ತನಿಖಾಧಿಕಾರಿಗಳು ಮತ್ತು ಸರ್ಕಾರಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದಾಗ ದರ್ಶನ್ ಪರ ವಕೀಲರು ತನಿಖಾಧಿಕಾರಿಗಳು ಆಕ್ಷೇಪಣೆ ಸಲ್ಲಿಸುವಂತಿಲ್ಲ. ಸರ್ಕಾರ ಆಕ್ಷೇಪಣೆ ಸಲ್ಲಿಸಬಹುದು ಎಂದು ಹೇಳಿದರು. ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.ದರ್ಶನ್ ಮನೆ ಊಟದ ವಿಷಯ ನಾಳೆ ನಿರ್ಧಾರವಾಗಲಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಮತ್ತಿತರರ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಅಂತ್ಯವಾಗಿದ್ದು, ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಎದುರು ವಿಚಾರಣೆಗೆ ಹಾಜರುಪಡಿಸಲಿದ್ದಾರೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ ನಟ ದರ್ಶನ್, ಪವಿತ್ರಾ ಗೌಡ, ಪ್ರದೂಷ್, ಪ್ರದೀಪ್ ಮತ್ತಿತರ ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ಕಾಲ ವಿಧಿಸಿದ್ದ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್‌್ಸ ಮೂಲಕ ನ್ಯಾಯಾಧೀಶರ ಎದುರು ಪೊಲೀಸರು ಹಾಜರುಪಡಿಸಲಿದ್ದಾರೆ.
ಇಂದು ವಿಚಾರಣೆ ನಡೆಸಲಿರುವ ನ್ಯಾಯಾಲಯ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಕಾದು ನೋಡಬೇಕು. ಪ್ರಕರಣ ಸಂಬಂಧ ಈವರೆಗೂ ಪೊಲೀಸರು ದೋಷಾರೋಪಣ ಪಟ್ಟಿ ಸಲ್ಲಿಸಿಲ್ಲ.