ಕಾರಾಗೃಹದಲ್ಲಿ ನಟ ದರ್ಶನ್‌ಗೆ ರಾಜ್ಯಾತಿಥ್ಯ, ಜೈಲರ್ ಸೇರಿ 7 ಅಧಿಕಾರಿಗಳು ಅಮಾನತು

ಬೆಂಗಳೂರು,ಆ.26- ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ರಾಜ್ಯಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿನ ಏಳು ಮಂದಿಯನ್ನು ಅಮಾನತುಗೊಳಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದರೆ ಅವರನ್ನೂ ಅಮಾನತುಗೊಳಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋಟೋ, ವಿಡಿಯೋಗಳು ಬಹಿರಂಗಗೊಂಡ ಬೆನ್ನಲ್ಲೇ ದರ್ಶನ್‌ ಅವರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು. ನಿನ್ನೆ ಸಂಜೆ 4.30ರ ವೇಳೆಗೆ ತಮಗೆ ಈ ಬಗ್ಗೆ ಮಾಹಿತಿ ಬಂತು. ತಕ್ಷಣವೇ … Continue reading ಕಾರಾಗೃಹದಲ್ಲಿ ನಟ ದರ್ಶನ್‌ಗೆ ರಾಜ್ಯಾತಿಥ್ಯ, ಜೈಲರ್ ಸೇರಿ 7 ಅಧಿಕಾರಿಗಳು ಅಮಾನತು