ಮಂಡ್ಯ, ಮಾ.7- ಇತಿಹಾಸ ಪ್ರಸಿದ್ಧ, ಪುಣ್ಯಕ್ಷೇತ್ರ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಗಂಗಾಧರೇಶ್ವರ ಸ್ವಾಮಿ ಮಹಾರಥೋತ್ಸವ ಹಾಗೂ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವ ಲಕ್ಷಾಂತರ ಭಕ್ತರ ನಡುವೆ ವಿಜೃಂಭಣೆಯಿಂದ ನೆರವೇರಿತು.
ಹೋಳಿ ಹುಣ್ಣಿಮೆಯ ಬ್ರಾಹ್ಮೀ ಮುಹೂರ್ತ 5 ಗಂಟೆಗೆ ಸರಿಯಾಗಿ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಆದಿಚುಂಚನಗಿರಿಯ ರಥ ಬೀದಿಯಲ್ಲಿ ಸರ್ವಾಲಂಕಾರಗೊಂಡಿದ್ದ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಲಕ್ಷಾಂತರ ಭಕ್ತರ ಹರ್ಷೋದ್ಗಾರದ ನಡುವೆ ಮಹಾ ರಥೋತ್ಸವಕ್ಕೆ ಚಾಲನೆ ನೀಡಿದರು.
ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಂದ ಹುಚ್ಚು ಪ್ರೇಮಿ
ರಥೋತ್ಸವದ ಅಂಗವಾಗಿ ಶ್ರೀಕ್ಷೇತ್ರದಲ್ಲಿ ತಿರುಗಣಿ ಉತ್ಸವ ಸೇರಿದಂತೆ ನಾನಾ ಪೂಜಾ ಕೈಂಕರ್ಯಗಳು ನಡೆದವು. ಶ್ರೀಕ್ಷೇತ್ರದ ಶ್ರೀ ಗಂಗಾಧರೇಶ್ವರ ಸ್ವಾಮಿಯನ್ನು ಅಲಂಕೃತಗೊಂಡಿದ್ದ ರಥದಲ್ಲಿ ಕೂರಿಸಲಾಗಿತ್ತು. ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ನೆರೆದಿದ್ದ ಲಕ್ಷಾಂತರ ಭಕ್ತರು ರಥ ಎಳೆದರು. ಮಂಗಳ ವಾದ್ಯಗಳೊಂದಿಗೆ ರಥೋತ್ಸವ ಆರಂಭವಾ ಗುತ್ತಿದ್ದಂತೆ ಭಕ್ತರು ಹಣ್ಣು, ಜವನಗಳನನ್ನು ಅರ್ಪಿಸಿ ಭಕ್ತಿ-ಭಾವ ಮೆರೆದರು.
ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತೆ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವವೂ ಪ್ರಾರಂಭವಾಯಿತು. ಒಂದೆಡೆ ಭಕ್ತರು ರಥವನ್ನು ಎಳೆದು ಧನ್ಯರಾಗುತ್ತಿದ್ದರೆ, ಇನ್ನೊಂದೆಡೆ ಸರ್ವಾಲಂಕಾರ ಭೂಷಿತರಾಗಿ ಭಕ್ತಾದಿಗಳಿಗೆ ಆಶೀರ್ವದಿಸಿದರು.
ರಥೋತ್ಸವಕ್ಕೆ ಜನಸಾಗರ: ಆದಿಚುಂಚನಗಿರಿ ಜಾತ್ರಾ ಮಹೋತ್ಸವಕ್ಕೆ ನಾಡಿನ ವಿವಿಧೆಡೆಗಳಿಂದ ಲಕ್ಷಾಂತರ ಮಂದಿ ಭಕ್ತರು ಶ್ರೀಕ್ಷೇತ್ರಕ್ಕೆ ಆಗಮಿಸಿದ್ದರು. ರಾತ್ರಿಯಿಡೀ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ರಥದ ಬೀದಿ, ಕಲ್ಯಾಣಿ ಬೀದಿ ಸೇರಿದಂತೆ ಮಠದ ಬೆಟ್ಟದ ತಪ್ಪಲಿನ ಇಕ್ಕೆಲಗಳಲ್ಲಿ ಭಕ್ತರು ತುಂಬಿ ತುಳುಕುತ್ತಿದ್ದರು.
AC ಸ್ಫೋಟ : ತಾಯಿ, ಮಕ್ಕಳು ಸಜೀವ ದಹನ
ಬಿಜಿಎಸ್ ಸಭಾ ಭವನದಲ್ಲಿ ಯಕ್ಷಗಾನ ಪ್ರದರ್ಶನಗೊಂಡರೆ, ರಾತ್ರಿಯಿಡೀ ಕ್ಷೇತ್ರದಲ್ಲಿ ಡೊಳ್ಳು ಕುಣಿತ, ಪಟದ ಕುಣಿತ, ಸೋಮನಕುಣಿತ, ಪೂಜಾ ಕುಣಿತ, ತಮಟೆ ಮೇಳ ಜಾನಪದ ಕಲಾ ತಂಡಗಳ ನೃತ್ಯ, ನಾಟಕ ಪ್ರದರ್ಶನಗಳು ನಡೆದವು.
adichunchanagiri, Jatra Mahotsava, Gangadhareshwara Swamy, Rathotsavam,