ಬೆಂಗಳೂರು,ಫೆ.28-ಇತಿಹಾಸ ಪ್ರಸಿದ್ದ ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ಇಂದಿನಿಂದ ಮಾ.8ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ನಾಡಿನ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ.
ಇಂದು ಬೆಳಗ್ಗೆ 8 ಗಂಟೆಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಪೂಜೆ, ಧ್ವಜ ಪೂಜೆ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಬಳಿಕ 10 ಗಂಟೆಗೆ ಸಾವಿರಾರು ಭಕ್ತರ ಹರ್ಷೋದ್ಘಾರ ಜೈಕಾರದ ನಡುವೆ ಶ್ರೀ ಕ್ಷೇತ್ರದಲ್ಲಿ ನಂದಿಪೂಜೆ ಸಲ್ಲಿಸಿ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಾಳೆಯಿಂದ ಶ್ರೀ ಕ್ಷೇತ್ರದಲ್ಲಿ ಸಾಂಸ್ಕøತಿಕ, ಕ್ರೀಡಾ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳು ಜರುಗಲಿವೆ. ಮಧ್ಯಾಹ್ನ 3 ಗಂಟೆಗೆ ಕಬ್ಬಡಿ ಪಂದ್ಯಾವಳಿಗೆ ಚಾಲನೆ ದೊರಕಲಿದ್ದು, ಚಂದ್ರಮೌಳೇಶ್ವರ ಸ್ವಾಮಿ ಉತ್ಸವ ಜರುಗಲಿದೆ.
ಮಾ.2ರಂದು ಮಧ್ಯಾಹ್ನ 3 ಗಂಟೆಗೆ ಕಬ್ಬಡಿ ಪಂದ್ಯಾವಳಿಯ ಸಮಾರೋಪ ಸಮಾರಂಭ ಜರುಗಲಿದೆ. ಸಂಜೆ 6 ಗಂಟೆಗೆ ಮಲ್ಲೇಶ್ವರ ಸ್ವಾಮಿ ಉತ್ಸವ ನಡೆಯಲಿದೆ. 9ಕ್ಕೆ ಸರಳ ಸಾಮೂಹಿಕ ವಿವಾಹ, ಹಿರಿಯ ದಂಪತಿಗಳಿಗೆ ಸನ್ಮಾನ, ಸಂಜೆ 6ರಿಂದ ಸಿದ್ದೇಶ್ವರಸ್ವಾಮಿ ಉತ್ಸವ ನಡೆಯಲಿದೆ.
ಮಾ.4ರಂದು ಬೆಳಿಗ್ಗೆ 7.30ಕ್ಕೆ ಕಾಲಭೈರವೇಶ್ವರ ಸ್ವಾಮಿಗೆ ಸುವರ್ಣ ಕವಚ ಅಲಂಕಾರ, ಗಂಗಾಧರೇಶ್ವರಸ್ವಾಮಿಗೆ ರಜತ ನಾಗಾಭರಣ ಅಲಂಕಾರದೊಂದಿಗೆ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಿಗ್ಗೆ ಒಕ್ಕಲಿಗರ ಸಂಘಗಳ ಪದಾಧಿಕಾರಿಗಳ ಸಮ್ಮಿಲನ, ಬೆಳಿಗ್ಗೆ ಕಾಲಭೈರವೇಶ್ವರಸ್ವಾಮಿಯ ಹೂವಿನ ಪಲ್ಲಕ್ಕಿ ಉತ್ಸವ, ನಿರ್ಮಲಾನಂದನಾಥ ಸ್ವಾಮೀಜಿ ಅವರ ಮುತ್ತಿನ ಪಲ್ಲಕ್ಕಿ ಉತ್ಸವ ಜರುಗಲಿವೆ.
ಅದೃಷ್ಟಕ್ಕಾಗಿ ನರಿ ಸಾಕಿದ್ದ ವ್ಯಕ್ತಿ ಅರೆಸ್ಟ್
ಮಾರ್ಚ್ 5ರಂದು ಬೆಳಿಗ್ಗೆ 10ಕ್ಕೆ ಆದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಚಾಲನೆ ಸಿಗಲಿದೆ. ಸಂಜೆ 6ಕ್ಕೆ ಜ್ವಾಲಾಪೀಠಾರೋಹಣ, ಸಿದ್ಧಸಿಂಹಾಸನ ಪೂಜೆ, ರಾತ್ರಿ 8ಕ್ಕೆ ಚಂದ್ರಮಂಡಲೋತ್ಸವ ಹಮ್ಮಿಕೊಳ್ಳಲಾಗಿದೆ.
ಮಾರ್ಚ್ 6ರಂದು ಸಂಜೆ 6.30ಕ್ಕೆ ಸರ್ವಧರ್ಮ ಸಮ್ಮೇಳನ, ರಾತ್ರಿ 8ಕ್ಕೆ ಕಾಲಭೈರವೇಶ್ವರಸ್ವಾಮಿ ತಿರುಗಣಿ ಉತ್ಸವ, ರಾತ್ರಿ 9ಕ್ಕೆ ಕಾಲಭೈರವೇಶ್ವರಸ್ವಾಮಿ ಪುಷ್ಕರಣಿಯಲ್ಲಿ ತೆಪ್ಪೋತ್ಸವ, ಪೌರಾಣಿಕ ನಾಟಕ ಆಯೋಜಿಸಲಾಗಿದೆ.
7ಕ್ಕೆ ಗಂಗಾಧರೇಶ್ವರ ಸ್ವಾಮಿ ಮಹಾರಥೋತ್ಸವ: ಗಂಗಾಧರೇಶ್ವರ ಸ್ವಾಮಿ ಮಹಾರಥೋತ್ಸವವು ಮಾ.7ರಂದು ಮುಂಜಾನೆ 4.30ರ ಬ್ರಾಹ್ಮಿ ಮುಹೂರ್ತದಲ್ಲಿ ಜರುಗಲಿದೆ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಅಡ್ಡಪಲ್ಲಕ್ಕಿ ಉತ್ಸವ, ಸಂಜೆ 6ಕ್ಕೆ ಗ್ರಾಮ ದೇವರ ಗಿರಿಪ್ರದಕ್ಷಿಣೆ, ಸೋಮೇಶ್ವರಸ್ವಾಮಿ ಉತ್ಸವ ನ ಜರುಗಲಿದೆ.
ಬಿಎಸ್‌ವೈ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು ಏಕೆ..? : ಡಿಕೆಶಿ
ಮಾ.8ರಂದು ಬೆಳಿಗ್ಗೆ 9ಕ್ಕೆ ಕೈ ನಿರ್ಮಲಾನಂದನಾಥ ಸ್ವಾಮೀಜಿ ಅವರು, ಧರ್ಮ, ಧ್ವಜಾವರೋಹಣ ಕೈ ಮಾಡಲಿದ್ದು, 9.30ಕ್ಕೆ ಬಿಂದು ನಾ ಸರೋವರದಲ್ಲಿ ಅವಕೃತ ಸ್ನಾನ, ಮಹಾಭಿಷೇಕ, ಬೆಳಿಗ್ಗೆ 10.30ಕ್ಕೆ ಸಭಾ 2, ಕಾರ್ಯಕ್ರಮದೊಂದಿಗೆ ಜಾತ್ರೆಗೆ ತೆರೆ ಬೀಳಲಿದೆ.
ಜಾತ್ರೆಗೆ ಬರುವ ಭಕ್ತರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದ್ದಾರೆ.
Adichunchanagiri, Jatra, Mahotsava,