ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ಯುವಜನೋತ್ಸವ

Social Share

ಮಂಡ್ಯ, ಜ.5- ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಡ್ಯ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ 2021-22ನೆ ಸಾಲಿನ ರಾಜ್ಯಮಟ್ಟದ ಯುವ ಜನೋತ್ಸವ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ , ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಉದ್ಘಾಟಿಸಿದರು.
ಎಲ್ಲಾ ಸಂಪನ್ಮೂಲಗಳಂತೆ ಮಾನವ ಸಂಪನ್ಮೂಲ ಕೂಡ ಪ್ರಮುಖವಾಗಿದೆ. ಅದರಂತೆ ನಮ್ಮ ದೇಶದಲ್ಲಿ ಮಾನವ ಸಂಪನ್ಮೂಲ ಹೆಚ್ಚಿದ್ದು, ಯುವಕರ ಶಕ್ತಿ ಹೆಚ್ಚಿದೆ. ದೇಶ ಕಟ್ಟುವಲ್ಲಿ ಇರುವ ಮಾನವ ಸಂಪನ್ಮೂಲ ಸದ್ಬಳಕೆ ಮಾಡಿಕೊಳ್ಳದಿದ್ದರೆ ಮಾನವ ಸಂಪನ್ಮೂಲ ಇದ್ದರೂ ವ್ಯರ್ಥವಾಗುತ್ತದೆ.
ರಾಜ್ಯದ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಲು ಎಲ್ಲಾ ಜಿಲ್ಲಾಗಳಿಂದ ಸಾವಿರಾರು ಮಕ್ಕಳು ಬಂದಿದ್ದೀರ. ನಿಮಗೆಲ್ಲರಿಗೂ ಕಾಲಭೈರವೇಶ್ವರ ಸ್ವಾಮಿ ಒಳಿತು ಮಾಡಲಿ. ಇಲ್ಲಿ ಗೆದ್ದು ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲೂ ಯಶಸ್ಸು ಸಿಗಲಿ ಎಂದು ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಆಶೀರ್ವದಿಸಿದರು.
ದೇಶದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ರಾಜ್ಯ ಉತ್ಸವ, ರಾಷ್ಟ್ರ ಉತ್ಸವವಾಗಿ ಸಾಂಸ್ಕøತಿಕ, ಅಧ್ಯಾತ್ಮಿಕವಾಗಿ ಅವರನ್ನು ಸೆಳೆಯುತ್ತದೆ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಯುವಕರ ಪಾತ್ರ ಬಹುಮುಖ್ಯ. ನಮ್ಮ ಭಾರತ ಶ್ರೇಷ್ಠ ಭಾರತ. ಪ್ರತಿ ವರ್ಷ ಈ ರೀತಿಯ ಕಾರ್ಯಕ್ರಮಗಳು ನಡೆಯುತ್ತವೆ. ಮಾರ್ಷಲ್ ಆಟ್ರ್ಸ್, ಯುವಕರ ಕಲಾಪ್ರದರ್ಶನದ ಕಾರ್ಯಾಗಾರಗಳಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಯುವಕ ಯುವತಿಯರು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಈ ರೀತಿಯ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ಆದಿಚುಂಚನಗಿರಿ ಮಠವೂ ಆಧ್ಯಾತ್ಮಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ರೀತಿಯಲ್ಲೂ ವಿದ್ಯಾರ್ಥಿಗಳ ಬಾಳು ಬೆಳಗಲು ಯುವಕರು-ಯುವತಿಯರು ಸಾಮಾಜಿಕವಾಗಿ, ಆರ್ಥಿಕವಾಗಿ ಶಕ್ತಿಯುತ ವಾಗಲು ಆದಿಚುಂಚನಗಿರಿ ಶ್ರಮಿಸುತ್ತಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಇದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆಯುತ್ತಿರುವ 25ನೇ ಕಾರ್ಯಕ್ರಮ. ಯುವಜನತೆಗೆ ಶಕ್ತಿ ತುಂಬಲು ಸರ್ಕಾರ ಬದ್ಧವಾಗಿದ್ದು, ಬಾಲಸುಬ್ರಹ್ಮಣ್ಯಂ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿ ನೀಡುವ ಸಲಹೆಗಳನ್ನು ಸ್ವೀಕರಿಸಿ ನೀತಿಗಳನ್ನು ರಚಿಸಲಾಗುತ್ತದೆ. ನಮ್ಮ ಕ್ರೀಡಾ ಇಲಾಖೆಯಿಂದ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಜಕ್ಕೂರು ವೈಮಾನಿಕ ತರಬೇತಿ ಶಾಲೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತದೆ.
ಮುಂದಿನ ಒಲಂಪಿಕ್ಸ್‍ಗೆ ಕರ್ನಾಟಕದಿಂದ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಬೇಕೆಂಬ ಗುರಿ ಹೊಂದಲಾಗಿದ್ದು, ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ 75 ಕ್ರೀಡಾಪಟುಗಳನ್ನು ದತ್ತು ಪಡೆಯಲಾಗಿದೆ. ಕ್ರೀಡೆಗೆ ಹೆಚ್ಚಿನ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧವಾಗಿದೆ. ಕೊರೊನಾ ನಿಯಮಗಳನ್ನು ಪಾಲಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದು ಸಚಿವ ಡಾ.ನಾರಾಯಣಗೌಡ ಅವರು ಕರೆ ನೀಡಿದರು.
ದೇಶದ ಪರಿವರ್ತನೆ: ಯುವ ಮನಸ್ಸು, ಪ್ರತಿಭೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಯುವ ಜನೋತ್ಸವ ಹಮ್ಮಿಕೊಳ್ಳಲಾಗಿದೆ. ಸ್ವಾಮಿ ವಿವೇಕಾನಂದರು ಹೇಳಿದಂತೆ ಯುವಕರು ಮನಸ್ಸು ಮಾಡಿದರೆ ಮಾತ್ರ ಪರಿವರ್ತನೆ ಸಾಧ್ಯ. ಅಮೃತ ಮಹೋತ್ಸವದ ಸಂಭ್ರಮದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಪರಿವರ್ತನೆ ಆಗಬೇಕು. ಅದಕ್ಕಾಗಿ ಗ್ರಾಮಗಳಲ್ಲಿ ಯುವಕರು ಕಾರ್ಯಪ್ರವೃತ್ತರಾಗಬೇಕು. ಯುವ ಜನೋತ್ಸವವೂ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಸೀಮಿತವಾಗದೆ ಸಮಾಜ ನಿರ್ಮಾಣದ ಪರಿಕಲ್ಪನೆಯೊಂದಿಗೆ ಯುವ ಸಂಘಟನೆಗಳು ಕಾರ್ಯನಿರ್ವಹಿಸಬೇಕು ಎಂದು ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.
ಭಾರತೀಯ ಸಂಸ್ಕøತಿ, ಪರಂಪರೆಯನ್ನು ಪ್ರತಿಬಿಂಬಿಸಲು ಯುವ ಜನೋತ್ಸವವನ್ನು ಆಚರಿಸಲಾಗುತ್ತಿದೆ. ಯುವ ಜನೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಗಾಯನ, ವಾದ್ಯ, ನೃತ್ಯ, ಏಕಾಂಕ ನಾಟಕ, ಆಶುಭಾಷಣ ಸ್ಪರ್ಧೆ ಸೇರಿದಂತೆ ಸುಮಾರು 18 ಪ್ರಾಕಾರದ ಕಾರ್ಯಕ್ರಮಗಳು ನಡೆಯಲಿದ್ದು, ಪ್ರತಿ ಜಿಲ್ಲಾಯಿಂದ ತಲಾ 57 ಸ್ರ್ಪಗಳಂತೆ ರಾಜ್ಯದ ಎಲ್ಲಾ ಜಿಲ್ಲಾಗಳಿಂದಲೂ ಸ್ರ್ಪಗಳು ಆಗಮಿಸಿದ್ದಾರೆ. ಸ್ಪರ್ಧೆಯಲ್ಲಿ ವಿಜೇತರಾದ ನೂರು ಜನರನ್ನು ಪುದುಚೇರಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಕಳುಹಿಸಿಕೊಡಲಾಗುತ್ತದೆ.
ಕಾರ್ಯಕ್ರಮದಲ್ಲಿ ಯುವ ನೀತಿ ರಚನಾ ಸಮಿತಿ ಅಧ್ಯಕ್ಷ ಆರ್. ಬಾಲಸುಬ್ರಹ್ಮಣ್ಯಂ, ಶಾಸಕರಾದ ಸುರೇಶ್‍ಗೌಡ, ಶ್ರೀನಿವಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆಯುಕ್ತ ಹೆಚ್. ಎನ್. ಗೋಪಾಲಕೃಷ್ಣ, ಜಿಲ್ಲಾಕಾರಿ ಅಶ್ವತಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

Articles You Might Like

Share This Article