Thursday, December 5, 2024
Homeರಾಜ್ಯಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

Adjournment of hearing of application seeking CBI Investigation of Muda scam

ಬೆಂಗಳೂರು,ನ.26– ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನುರಾಜ್ಯ ಹೈಕೋರ್ಟ್ ಡಿ.10ಕ್ಕೆ ಮುಂದೂಡಿದೆ.

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಹಾಗೂ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ವಿಚಾರಣೆಗೆ ಕೈಗೊಂಡಾಗ ಆರೋಪಿ ದೇವರಾಜು ಪರ ಸುಪ್ರೀಂ ಕೋರ್ಟ್ ಹಿರಿಯ ವಕೀಲ ದುಶ್ಯಂತ್ ದವೆ ಅವರು ವಾದ ಮಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶ ಎತ್ತಿ ಹಿಡಿದಿರುವ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆ ಡಿಸೆಂಬರ್ 5ಕ್ಕೆ ನಿಗದಿಯಾಗಿದೆ. ಈ ನಿಟ್ಟಿನಲ್ಲಿ ಸಿಬಿಐ ತನಿಖೆ ಕೋರಿರುವ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 5ರ ನಂತರ ನಿಗದಿಪಡಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲ ರಾಘವನ್ ಆಕ್ಷೇಪ ವ್ಯಕ್ತಪಡಿಸಿ, ವಿಚಾರಣೆ ಮುಂದೂಡುವುದಕ್ಕೂ ಮುನ್ನ ತನಿಖೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಒಮೆ ಪರಿಶೀಲಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ದುಶ್ಯಂತ್ ದವೆ, ಇದು ಅನ್ಯಾಯದ ನಡೆ, ಸರಿಯಾದ ಕ್ರಮವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈ ವೇಳೆ ಪೀಠ, ಇಂದು ಅರ್ಜಿ ವಿಚಾರಣೆ ನಡೆಸುತ್ತಿಲ್ಲ. ಹೀಗಾಗಿ ದಾಖಲೆ ಪರಿಶೀಲನೆ ನಡೆಸುವ ಅಗತ್ಯವಿಲ್ಲ ಎಂದು ತಿಳಿಸಿ ವಿಚಾರಣೆಯನ್ನು ಡಿಸೆಂಬರ್ 10ರಂದು 2.30ಕ್ಕೆ ನಿಗದಿಪಡಿಸಿತು.ಅವತ್ತೇ ವಾದ-ಪ್ರತಿವಾದ ಮುಕ್ತಾಯ ಮಾಡಬೇಕು ಎಂದು ಸೂಚಿಸಿದರು.ಈ ನಡುವೆ ವಿಭಾಗೀಯ ಪೀಠದ ವಿಛಾರಣೆ ಕುತೂಹಲ ಕೆರಳಿಸಿದೆ

RELATED ARTICLES

Latest News