ಆಡಳಿತ ಸುಧಾರಣೆಗೆ 68 ಸಾವಿರ ಕೋಟಿ ಮೀಸಲು

Social Share

ಬೆಂಗಳೂರು,ಫೆ.17- ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳ ವಲಯಕ್ಕೆ ಬಜೆಟ್‍ನಲ್ಲಿ 68,585 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ.

ನ್ಯಾಯಾಂಗದ ಕಟ್ಟಡಗಳ ಯೋಜನೆಯಡಿ ಕಳೆದ ನಾಲ್ಕು ವರ್ಷಗಳಲ್ಲಿ 580 ಕೋಟಿ ರೂಪಾಯಿ ವೆಚ್ಚ ಭರಿಸಲಾಗಿದೆ. ಇದರಲ್ಲಿ ರಾಜ್ಯದ ಪಾಲು 397 ಕೋಟಿ ರೂಪಾಯಿಗಳಾಗಿದೆ. ಈ ಅವಧಿಯಲ್ಲಿ 39 ನ್ಯಾಯಾಂಗ ಕಟ್ಟಡಗಳನ್ನು ಪೂರ್ಣಗೊಳಿಸಲಾಗಿದೆ. ಹೊಸದಾಗಿ 83 ನ್ಯಾಯಾಲಯಗಳನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬಜೆಟ್‍ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ..? ಇಲ್ಲದಿ ಕಂಪ್ಲೀಟ್ ಮಾಹಿತಿ

ವಕೀಲರ ಆರೋಗ್ಯ ಸೌಲಭ್ಯ ಕಾರ್ಯಕ್ರಮ ರೂಪಿಸಲು 100 ಕೋಟಿ ರೂ.ಕಾರ್ಪಸ್ ಫಂಡ್ ರಚಿಸಲು ರಾಜ್ಯ ಸರ್ಕಾರದಿಂದ ಶೇ.50ರಷ್ಟು ಮೊತ್ತ ನೀಡಲು ಅನುಮೋದನೆ ನೀಡಲಾಗಿದೆ.

#AdministrativeReforms, #StateBudget2023, #BommaiBudget, #BasavarajBommai #Budget2023, #StateBudget2023, #BommaiBudget, #ಬಜೆಟ್ #ಬಜೆಟ್2023,

Articles You Might Like

Share This Article