Tuesday, May 21, 2024
Homeಅಂತಾರಾಷ್ಟ್ರೀಯಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸೇನಾ ಹೆಲಿಕಾಪ್ಟರ್ ಪತನ

ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸೇನಾ ಹೆಲಿಕಾಪ್ಟರ್ ಪತನ

ಇಸ್ಲಾಮಾಬಾದ್, ಮೇ 15-ಪಶ್ಚಿಮ ಅಫ್ಘಾನಿಸ್ತಾನದ ಘೋರ್ ಪ್ರಾಂತ್ಯದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಈ ಘಟನೆಯಲ್ಲಿ ಒಬ್ಬ ಸಾವನ್ನಪ್ಪಿದ್ದಾನೆ ಎಂದು ತಾಲಿಬಾನ್ ರಕ್ಷಣಾ ಸಚಿವಾಲಯ ತಿಳಿಸಿದೆ. ತಾಂತ್ರಿಕ ಸಮಸ್ಯೆಯಿಂದ ಎಂಐ-17 ಅಪಘಾತ ಸಂಭವಿಸಿದೆ ಎಂದು ಹೇಳಿಕೆಯೊಂದು ತಿಳಿಸಿದೆ.

ಘೋರ್ನ ಪ್ರಾಂತೀಯ ರಾಜಧಾನಿಯಾದ ಫಿರೋಜ್ ಕೊಹ್ ನಗರದ ಬಳಿ ಜನರನ್ನು ಹೊತ್ತೊಯ್ಯುತ್ತಿದ್ದ ವಾಹನವು ನದಿಗೆ ಬಿದ್ದ ನಂತರ ಹೆಲಿಕಾಪ್ಟರ್ ರಕ್ಷಣಾ ಕಾರ್ಯಾಚರಣೆಯಲ್ಲಿತ್ತು ಎಂದು ಸಚಿವಾಲಯವು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.ಈ ಅಪಘಾತದಲ್ಲಿ 12 ಪ್ರಯಾಣಿಕರು ಗಾಯಗೊಂಡಿದ್ದಾರೆ .

ಸಿಬ್ಬಂದಿ ತುರ್ತು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿದರು ಆದರೆ ಹೆಲಿಕಾಪ್ಟರ್ ಗೋಡೆಗೆ ಡಿಕ್ಕಿ ಹೊಡೆದು ಅಪ್ಪಳಿದೆ ಎನ್ನಲಾಗಿದೆ ಇದರಲ್ಲಿ ಎಷ್ಟು ಜನರು ವಿಮಾನದಲ್ಲಿದ್ದರು ಎಂಬುದು ಸ್ಪಷ್ಟವಾಗಿಲ್ಲ .

RELATED ARTICLES

Latest News