ಕಾಬೂಲ್.ಆ.18-ಕಾಬೂಲ್‍ನ ಮಸೀದಿಯೊಂದರಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 30ಕ್ಕೂ ಹೆಚ್ಚು ಜನ ಸಾವನ್ನಪ್ಪಿ 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸಂಜೆಯ ಪ್ರಾರ್ಥನೆಯ ವೇಳೆ ಈ ಘಟನೆ ನಡೆದಿದ್ದು ಅನೇಕ ಸಾವು ನೋವುಗಳು ಸಂಭವಿಸಿವೆ ಎಂದು ಪೊಲೀಸರು ಹೇಳಿದ್ದಾರೆ ಆದರೆ ಎಷ್ಟು ಮಂದಿ ಎಂದು ಹೇಳಿಲ್ಲ ಆದರೆ ತಾಲಿಬಾನ್ ಗುಪ್ತಚರ ಅಧಿಕಾರಿಯೊಬ್ಬರು ರಾಯಿಟರ್ಸ್ ಸುದ್ದಿ ಮಾಧ್ಯಮಕ್ಕೆ ನೀಡಿರುವ ಮಾಹಿತಿ ಪ್ರಕಾರ 35 ಜನರು ಕೊಲ್ಲಲ್ಪಟ್ಟಿದ್ದಾರೆ ಮತ್ತು ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಹೇಳಿದರು.
ಅಲ್ ಜಜೀರಾ ಒಟ್ಟು ಸಾವಿನ ಸಂಖ್ಯೆಯನ್ನು 25 ಎಂದು ಉಲ್ಲೇಖಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಉತ್ತರ ಕಾಬೂಲ್‍ನಲ್ಲಿ ಪ್ರಬಲ ಸ್ಫೋಟದ ಶಬ್ದ ಕೇಳಿಸಿತು, ಹತ್ತಿರದ ಕಟ್ಟಡಗಳ ಕಿಟಕಿಗಳು ಒಡೆದು ಹೋಗಿವೆ. ಉಗ್ರರಿಂದ ಬಾತವಾದ ಆಪ್ಘಾನಿಸ್ತಾನದಲ್ಲಿ ಜನರರು ತತ್ತರಿಸಿ ಹೋಗಿದ್ದಾರೆ.