ಅಸ್ಸಾಂ,ಜು.17- ಇಲ್ಲಿನ ದಿಬ್ರುಗಢ್‍ನ ಭೋಗಾಲಿ ಪಥರ್ ಗ್ರಾಮದಲ್ಲಿ ಹಂದಿಯೊಂದಕ್ಕೆ ನಡೆಸಿದ ಪರೀಕ್ಷೆಯಲ್ಲಿ ಆಫ್ರಿಕನ್ ಸ್ವೈನ್ ವೈರಸ್ ಪತ್ತೆಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ದಿಬ್ರುಗಢ್ ಪಶುಸಂಗೋಪನೆ ಮತ್ತು ಪಶುವೈದ್ಯಾಧಿಕಾರಿ ಡಾ.ಹಿಮಂದು ಬಿಕಾಶ್ ಬರುವಾ, ಹಂದಿಯೊಂದಕ್ಕೆ ಆಫ್ರಿಕನ್ ಹಂದಿ ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆ ಪ್ರದೇಶದ ವ್ಯಾಪ್ತಿಯಲ್ಲಿರುವ ಎಲ್ಲಾ ಹಂದಿಗಳನ್ನು ಕೊಲ್ಲಲಾಗಿದೆ ಎಂದು ತಿಳಿಸಿದ್ದಾರೆ.
ನಾವು ಮೊದಲು 1 ಕಿಮೀ ವರೆಗಿನ ಪ್ರದೇಶವನ್ನು ಸೋಂಕಿತ ಎಂದು ಘೋಷಿಸಿದ್ದು, ಸೋಂಕಿತ ಪ್ರದೇಶದಲ್ಲಿ ಎಲ್ಲಾ ಹಂದಿಗಳನ್ನು ಕೊಂದು ಹೂಳಿದ್ದೇವೆ. ಅದೇ ಸಮಯದಲ್ಲಿ, ನಾವು ಇಡೀ ಪ್ರದೇಶವನ್ನು ಸ್ಯಾನಿಟೈಸ್ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.
ಆಫ್ರಿಕನ್ ಹಂದಿ ಜ್ವರವು ಹಂದಿಗಳಿಗೆ ಮಾರಣಾಂತಿಕ ಮತ್ತು ಹೆಚ್ಚು ಸಾಂಕ್ರಾಮಿಕವಾಗಿದ್ದರೂ ಸಹ ಮನುಷ್ಯರಿಗೆ ಸೋಂಕು ಅಥವಾ ಹರಡುವುದಿಲ್ಲ. ಹೀಗಾಗಿ ಆತಂಕಕೊಳ್ಳಕಾಗಬಾರದೆಂದು ತಜ್ಞರು ತಿಳಿಸಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, 2020ರಿಂದ ಈ ವರ್ಷ ಜುಲೈ 11ರವರೆಗೆ ರಾಜ್ಯದಲ್ಲಿ ಸುಮಾರು 40,159 ಹಂದಿಗಳು ಜ್ವರದಿಂದ ಸಾವನ್ನಪ್ಪಿವೆ, 1,181 ಹಂದಿಗಳನ್ನು ಕೊಲ್ಲಲಾಗಿದೆ.