ಅಗರ್ತಲಾ,ಡಿ.3- ಭಾರತದ ಧ್ವಜಕ್ಕೆ ಅವಮಾನ ಮಾಡಿರುವುದರಿಂದ ಬಾಂಗ್ಲಾದೇಶದ ಅತಿಥಿಗಳಿಗೆ ಇಲ್ಲಿ ಸೇವೆ ಸಿಗುವುದಿಲ್ಲ ಎಂದು ಆಲ್ ತ್ರಿಪುರಾ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರ ಸಂಘ ಹೇಳಿದೆ.
ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಸೈಕತ್ ಬಂಡೋಪಾಧ್ಯಾಯ ತಿಳಿಸಿದ್ದಾರೆ. ನಮದು ಜಾತ್ಯತೀತ ದೇಶ ಮತ್ತು ಎಲ್ಲಾ ಧರ್ಮಗಳಿಗೆ ಗೌರವವಿದೆ. ನಮ ರಾಷ್ಟ್ರಧ್ವಜವನ್ನು ಅಪವಿತ್ರಗೊಳಿಸಲಾಗಿದೆ ಮತ್ತು ಅಲ್ಪಸಂಖ್ಯಾ ಹಿಂದೂಗಳು ಬಾಂಗ್ಲಾದೇಶದಲ್ಲಿ ಮೂಲಭೂತವಾದಿಗಳಿಂದ ದಬ್ಬಾಳಿಕೆಯನ್ನು ಎದುರಿಸುತ್ತಿದ್ದಾರೆ.
ಈ ಹಿಂದೆಯೂ ಇಂತಹ ಘಟನೆಗಳು ನಡೆಯುತ್ತಿದ್ದವು ಆದರೆ ಈಗ ಅದು ಮಿತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಾಂಗ್ಲಾದೇಶದಲ್ಲಿ ಈಗಿರುವ ಪರಿಸ್ಥಿತಿ ನಿಜವಾಗಿಯೂ ಚಿಂತಾಜನಕವಾಗಿದೆ ಎಂದು ಕಳವಖ ವ್ಯಕ್ತಪಡಿಸಿ ,ವಿವಿಧ ಉದ್ದೇಶಗಳಿಗಾಗಿ ತ್ರಿಪುರಾಕ್ಕೆ ಬರುವ ಬಾಂಗ್ಲಾ ಜನರಿಗೆ ನಾವು ಸೇವೆ ಸಲ್ಲಿಸುವುದಿಲ್ಲ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರನ್ನು ನಡೆಸುತ್ತಿರುವುದನ್ನು ನಾವು ಖಂಡಿಸುತ್ತೇವೆ ಎಂದು ಅವರು ಹೇಳಿದರು.
ಈ ಹಿಂದೆ, ಮಲ್ಟಿ-ಸ್ಪೆಷಾಲಿಟಿ ಖಾಸಗಿ ಆಸ್ಪತ್ರೆಯು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ಬಾಂಗ್ಲಾದೇಶದ ಯಾವುದೇ ರೋಗಿಗಳಿಗೆ ಚಿಕಿತ್ಸೆನೀಡುವುದಿಲ್ಲ ಎಂದು ಘೋಷಿಸಿತು