ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಹ್ಯಾಟ್ರಿಕ್ ಹೀರೋ ನಟ ಡಾ.ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು -ಯುವ ನಾಯಕ ಎಸ್.ರಘುವೀರ್‌ಗೌಡ ಮತ್ತಿತರರು ಈ ಸಂದರ್ಭದಲ್ಲಿದ್ದರು.
ಮೂತ್ರಕೋಶದ ಕ್ಯಾನ್ಸರ್ ಸಂಬಂಧ ಆಪರೇಷನ್ ಮಾಡಿಸಿಕೊಳ್ಳಲು ನಟ ಶಿವರಾಜಕುಮಾರ್ ಡಿ.18ರಂದು ಅಮೆರಿಕಕ್ಕೆ ತೆರಳಿದ್ದರು. ಬಳಿಕ ಡಿ.24 ರಂದು ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಆಪರೇಷನ್ ಆದ ಒಂದು ತಿಂಗಳ ಬಳಿಕ ಅಮರಿಕಾದಿಂದ ತಾಯ್ನಾಡಿಗೆ ಮರಳಿದ್ದರು. ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಶಿವರಾಜ್ ಕುಮಾರ್ ಅವರನ್ನು ಒಬ್ಬರಾದ ಮೇಲೆ ಒಬ್ಬರಂತೆ ಗಣ್ಯರು ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸುತ್ತಿದ್ದಾರೆ.