Thursday, September 19, 2024
Homeರಾಜ್ಯಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ ವಿಶೇಷ ಬಸ್‌‍ ವ್ಯವಸ್ಥೆ

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ ವಿಶೇಷ ಬಸ್‌‍ ವ್ಯವಸ್ಥೆ

Ahead of Gowri-Ganesha Festival, KSRTC to run additional buses

ಹುಬ್ಬಳ್ಳಿ,ಸೆ.2- ಗೌರಿ – ಗಣೇಶ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಸೆ.5 ರಿಂದ 10ರವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಈ ಬಾರಿ ಗೌರಿ-ಗಣೇಶ ಹಬ್ಬ ವಾರಾಂತ್ಯದಲ್ಲಿ ಬಂದಿದ್ದು ಸಾರ್ವಜನಿಕರು ಅದರಲ್ಲೂ ಪ್ರಮುಖವಾಗಿ ನೌಕರರಿಗೆ ಸಂಭ್ರಮ ಹೆಚ್ಚಿಸಿದೆ. ಸೆಪ್ಟೆಂಬರ್‌ 6ರಂದು ಶುಕ್ರವಾರ ಗೌರಿ ಹಬ್ಬ, ಸೆ.7ರಂದು ಶನಿವಾರ ಗಣೇಶ ಚತುರ್ಥಿ ಹಾಗೂ 8ರಂದು ಭಾನುವಾರ ಸಾರ್ವಜನಿಕ ರಜೆ ಇರುತ್ತದೆ.

ಹಬ್ಬದ ಆಚರಣೆಗಾಗಿ ಬೆಂಗಳೂರು, ಮಂಗಳೂರು, ಪುಣೆ, ಮುಂಬೈ, ಗೋವಾ ಮತ್ತಿತರ ಪ್ರಮುಖ ಊರುಗಳಲ್ಲಿ ನೆಲೆಸಿರುವ ಹಲವರು ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಸೆಪ್ಟೆಂಬರ್‌ 5ರಿಂದ 10ರವರೆಗೆ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.

ಅದಕ್ಕಾಗಿ ವೋಲ್ವೋ ಎಸಿ ಐರಾವತ, ಎಸಿ ಸ್ಲೀಪರ್‌, ನಾನ್‌ ಎಸಿ ಸ್ಲೀಪರ್‌, ರಾಜಹಂಸ ಹಾಗೂ ವೇಗದೂತ ಸಾರಿಗೆಗಳು ಸೇರಿದಂತೆ ವಿವಿಧ ಮಾದರಿಯ ಬಸ್‌‍ಗಳನ್ನು ನಿಯೋಜಿಸಲಾಗಿದೆ.

ಹಬ್ಬದ ಆಚರಣೆಗಾಗಿ ಆಗಮಿಸುವವರ ಅನುಕೂಲಕ್ಕಾಗಿ ಸೆ.5 ಮತ್ತು 6ರಂದು ಬೆಂಗಳೂರು, ಮಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹೆಚ್ಚುವರಿ ವಿಶೇಷ ಬಸ್‌‍ ವ್ಯವಸ್ಥೆ ಮಾಡಲಾಗಿದೆ.

ಅದೇ ರೀತಿ ಹಬ್ಬದ ರಜೆ ಮುಗಿಸಿಕೊಂಡು ತಮ ಕಾರ್ಯ ಕ್ಷೇತ್ರಗಳಿಗೆ ಹಿಂದಿರುಗುವವರ ಅನುಕೂಲಕ್ಕಾಗಿ ಸೆ.8ರಂದು ರವಿವಾರ ಹಾಗೂ 9ರಂದು ಹುಬ್ಬಳ್ಳಿಯಿಂದ ಬೆಂಗಳೂರು, ಪುಣೆ, ಗೋವಾ, ಮಂಗಳೂರು, ವಿಜಯಪುರ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳನ್ನು ಓಡಿಸಲಾಗುತ್ತದೆ.

ಸೆ.5ರಿಂದ 10ರವರೆಗೆ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಅಕ್ಕಪಕ್ಕದ ಜಿಲ್ಲೆಗಳ ಪ್ರಮುಖ ಸ್ಥಳಗಳ ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಓಡಾಟ ನಿರೀಕ್ಷಿಸಲಾಗಿದೆ. ಈ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌.ರಾಮನಗೌಡರ ತಿಳಿಸಿದ್ದಾರೆ.

RELATED ARTICLES

Latest News