ಬೆಂಗಳೂರು,ಮಾ.15- ಬಿಬಿಎಂಪಿ ಆಯ್ತು, ಕೆಪಿಟಿಸಿಎಲ್ ಆಯ್ತು ಇದೀಗ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ತಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮಾ.21 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರು ಬಸ್ ಸಿಗದೆ ಪರದಾಡುವ ಸನ್ನಿವೇಶ ನಿರ್ಮಾಣವಾಗುವ ಸಾಧ್ಯತೆಗಳಿವೆ. ಸಾರಿಗೆ ನೌಕರರು ಹಮ್ಮಿಕೊಂಡಿರುವ ಪ್ರತಿಭಟನೆಗೆ ತಮ್ಮ ಬೆಂಬಲ ನೀಡಲಾಗಿದೆ ಎಂದು ಅನಂತ ಸುಬ್ಬರಾವ್ ಅವರು ತಿಳಿಸಿದ್ದು, ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಪತ್ರ ಬರೆಯಲಾಗಿದೆ.
ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಮುಖ್ಯ ಶಿಕ್ಷಕ ಬಂಧನ
ಮುಷ್ಕರ ಆರಂಭವಾದರೆ ರಾಜ್ಯದಲ್ಲಿ ಸಂಚರಿಸುತ್ತಿರುವ 23 ಸಾವಿರ ಬಸ್‍ಗಳ ಸಂಚಾರ ರದ್ದಾಗಲಿದೆ ಹೀಗಾಗಿ ನೌಕರರ ಬೇಡಿಕೆ ಈಡೇರಿಸುವತ್ತ ಗಮನ ಹರಿಸಿ ಎಂದು ಸಿಎಂಗೆ ಅನಂತ ಸುಬ್ಬರಾವ್ ಮನವಿ ಮಾಡಿಕೊಂಡಿದ್ದಾರೆ
ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರ ಸಮಾನಮನಸ್ಕರ ವೇದಿಕೆ ಮಾರ್ಚ್ 24ರಿಂದ ಮುಷ್ಕರಕ್ಕೆ ಕರೆ ನೀಡಿರುವುದು ಗೊಂದಲಕ್ಕೆ ಕಾರಣವಾಗಿದೆ.
ತಿಂಗಳುಗಟ್ಟಲೆ ತಾಯಿಯ ಶವ ಬಚ್ಚಿಟ್ಟಿದ್ದ ಮಗಳು
ಸಾರಿಗೆ ಇಲಾಖೆಯ ಎರಡೂ ಬಣಗಳು ಪ್ರತ್ಯೇಕವಾಗಿ ಬಂದ್‍ಗೆ ಕರೆ ನೀಡಿರುವುದು ಒಗ್ಗಟ್ಟಿನ ಹೋರಾಟಕ್ಕೆ ತೊಡಕಾಗಿ ಪರಿಣಮಿಸುವ ಸಾಧ್ಯತೆಗಳಿವೆ.
Ugadi, KSRTC, staff, threaten, indefinite, strike, March 21,