ಗಾಂಧಿನಗರ,ಜೂ.15- ಕಳೆದ ಗುರುವಾರ ಇಲ್ಲಿನ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಅಪಘಾತದಲ್ಲಿ ಸಾವನ್ನಪ್ಪಿರುವ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಮೃತದೇಹದ ಗುರುತು ಈ ವರೆಗೂ ಪತ್ತೆಯಾಗಿಲ್ಲ, ವಿಜಯ್ ರೂಪಾನಿ ಡಿಎನ್‌ಎ ಮ್ಯಾಚ್ ಇನ್ನು ಸಿಕ್ಕಿಲ್ಲ. ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆಯಾಗಿಲ್ಲ ಎಂದು ಸಿವಿಲ್ ಆಸ್ಪತ್ರೆ ಹೆಚ್ಚುವರಿ ಸೂಪರಿಂಟೆಂಡೆಂಟ್ ಡಾ. ರಜನೀಶ್ ಪಟೇಲ್ ತಿಳಿಸಿದ್ದಾರೆ.
ಸದ್ಯ 31 ಡಿಎನ್‌ಎ ಮ್ಯಾಚ್ ಆಗಿದೆ. 12 ಮೃತದೇಹಗಳ ಹಸ್ತಾಂತರ ಮಾಡಲಾಗಿದೆ. ಡಿಎನ್‌ಎ ಪರೀಕ್ಷೆ ಮೂಲಕ 31 ಶವದ ಗುರುತು ಪತ್ತೆ ಹಚ್ಚಲಾಗಿದೆ. ಜನರಿಂದ ಯಾವುದೇ ಹಣ ಪಡೆಯುತ್ತಿಲ್ಲ. ಡಿಎನ್‌ಎ ಪರೀಕ್ಷೆಯ ಮೂಲಕ ಸ್ಯಾಂಪಲ್ ಮ್ಯಾಚ್ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಇದು ಚಾಲೆಂಜಿಂಗ್ ಕೆಲಸ. ಉದಯಪುರ, ಖೇಡಾ, ಅಹಮದಾಬಾದ್ ಜಿಲ್ಲೆಯ ಜನರಿಗೆ ಮೃತ ದೇಹ ನೀಡಲಾಗಿದೆ ಎಂದು ಹೇಳಿದರು.
ಏರ್ ಇಂಡಿಯಾ ವಿಮಾನ ಪತನ ದುರಂತದಲ್ಲಿ ಮೃತಪಟ್ಟವರ ಮೃತದೇಹಗಳಿಗಾಗಿ ಸಂಬಂಧಿಕರು ಇನ್ನೂ ಕಾಯುತ್ತಿದ್ದಾರೆ. ಸಿವಿಲ್ ಆಸ್ಪತ್ರೆಯಲ್ಲಿ ಹತ್ತಾರು ಕುಟುಂಬಗಳ ಕುಟುಂಬಸ್ಥರು ಮೃತದೇಹಕ್ಕಾಗಿ ಕಾಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಡಿಎನ್‌ಎ ಮ್ಯಾಚ್ ಮಾಡುವ ಕಾರ್ಯ ನಡೆಯುತ್ತಿದೆ. ಈವರೆಗೂ 31 ಮೃತ ದೇಹಗಳ ಡಿಎನ್‌ಎ ಮ್ಯಾಚ್ ಆಗಿದ್ದು, 12 ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಬಾಕಿ ಮೃತದೇಹಗಳ ಡಿಎನ್‌ಎ ಪರೀಕ್ಷೆ ನಡೆಯುತ್ತಿದೆ. ಈ ಹಿನ್ನಲೆ ಆಸ್ಪತ್ರೆ ಹೊರಗೆ ಕುಟುಂಬಸ್ಥರು ಕಾಯುತ್ತಿದ್ದಾರೆ.