Wednesday, July 16, 2025
Homeರಾಜ್ಯಸಚಿವರ ಜೊತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ ಪ್ರತ್ಯೇಕ ಸಭೆ

ಸಚಿವರ ಜೊತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ ಪ್ರತ್ಯೇಕ ಸಭೆ

AICC General Secretary Surjewala holds separate meeting with ministers

ಬೆಂಗಳೂರು,ಜು.16- ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೆವಾಲ ಅವರು ಇಂದು ಕೆಲ ಸಚಿವರ ಜೊತೆ ಪ್ರತ್ಯೇಕ ಸಭೆ ನಡೆಸಿದರು. ಶಾಸಕರ ಜೊತೆ ಸಭೆ ನಡೆಸಿ ಅವರ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದ್ದ ಸುರ್ಜೆವಾಲ ಅವರು
ಇಂದು ಸಚಿವರ ಜೊತೆ ಸಭೆ ನಡೆಸಿದ್ದಾರೆ.

ಇಂದು ಬೆಳಗ್ಗೆ ಒಬ್ಬೊಬ್ಬ ಸಚಿವರ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿ, ಆಡಳಿತ ವೈಖರಿ, ಖಾತೆ ನಿರ್ವಹಣೆ, ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರೊಂದಿಗಿನ ಒಡನಾಟ, ಪಕ್ಷ ಸಂಘಟನೆಗೆ ನೀಡಬೇಕಾದ ಒತ್ತು ಮೊದಲಾದ ವಿಚಾರಗಳ ಬಗ್ಗೆ ಅಭಿಪ್ರಾಯ ಪಡೆದಿದ್ದಾರೆ.

ಇಂದು ಬೆಳಗ್ಗೆ ಸಚಿವ ಈಶ್ವರ್‌ ಖಂಡ್ರೆ ಅವರೊಂದಿಗೆ ಸಭೆ ನಡೆಸಿ ಅಗತ್ಯ ಮಾಹಿತಿ ಪಡೆದುಕೊಂಡಿದ್ದಾರೆ. ಅರಣ್ಯ ಒತ್ತುವರಿ ತೆರವು, ಅರಣ್ಯ ಸಂರಕ್ಷಣೆಗೆ ಆದ್ಯತೆ, ವನ್ಯಜೀವಿ ಸಂರಕ್ಷಣೆಗೆ ಒತ್ತು ಕೊಡುವ ವಿಚಾರದಲ್ಲಿ ಇಲಾಖೆಯಿಂದ ಕೈಗೊಂಡಿರುವ ಮಾಹಿತಿಗಳನ್ನು ಸಚಿವರು ಸುರ್ಜೆವಾಲ ಅವರಿಗೆ ನೀಡಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ.

ಅರಣ್ಯ ಇಲಾಖೆ ಬಗ್ಗೆ ಈಶ್ವರ್‌ ಖಂಡ್ರೆ ಅವರಿಂದ ಮಾಹಿತಿ ಪಡೆದ ಸುರ್ಜೆವಾಲ ಅವರು, ಬೀದರ್‌ ಜಿಲ್ಲಾ ಕಾಂಗ್ರೆಸ್‌‍ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದಲ್ಲಿ ಭಿನ್ನಮತಕ್ಕೆ ಅವಕಾಶವಿಲ್ಲದಂತೆ ಎಲ್ಲರನ್ನು ಒಟ್ಟಿಗೆ ಕರೆದೊಯ್ಯುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈಶ್ವರ ಖಂಡ್ರೆ ಅಲ್ಲದೆ ಸಚಿವರಾದ ಕೃಷ್ಣ ಭೈರೇಗೌಡ, ಎಂ.ಬಿ.ಪಾಟೀಲ್‌, ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್‌, ಚೆಲುವರಾಯಸ್ವಾಮಿ, ಪರಮೇಶ್ವರ್‌, ಎಚ್‌.ಕೆ.ಪಾಟೀಲ್‌ ಅವರ ಜೊತೆಯೂ ಸುರ್ಜೆವಾಲ ಸಭೆ ನಡೆಸಿ ಪ್ರತ್ಯೇಕವಾಗಿ ಅಭಿಪ್ರಾಯವನ್ನು ಸಂಗ್ರಹಿಸಲಿದ್ದಾರೆ.

RELATED ARTICLES

Latest News