ಬೆಂಗಳೂರು, ಮಾ.11- ಗಗನಸಖಿಯೊಬ್ಬರು ಅಪಾರ್ಟ್ ಮೆಂಟ್‍ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ನಡೆದಿದೆ.
ಮೂಲತಃ ಹಿಮಾಚಲ ಪ್ರದೇಶದ ಅರ್ಚನಾ(28) ಆತ್ಮಹತ್ಯೆ ಮಾಡಿಕೊಂಡಿರುವ ಗಗನಸಖಿ.
ಕೋರಮಂಗಲದ 8ನೇ ಬ್ಲಾಕ್‍ನಲ್ಲಿರುವ ರೇಣುಕಾ ರೆಸಿಡೆನ್ಸಿ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ಗಗನಸಖಿ ಅರ್ಚನಾ ಅವರು ಸಾಫ್ಟ್ ವೇರ್ ಎಂಜಿನಿಯರ್ ಜೊತೆ ಲೀವಿಂಗ್ ಟುಗೆದರ್‍ನಲ್ಲಿದ್ದರು. ಮಧ್ಯರಾತ್ರಿ 12 ಗಂಟೆ ಸುಮಾರಿನಲ್ಲಿ ಅರ್ಚನಾ ಅವರು ಅಪಾರ್ಟ್ ಮೆಂಟ್‍ನ 4ನೇ ಮಹಡಿಗೆ ಹೋಗಿ ಅಲ್ಲಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮದ್ಯದಮಲಿನಲ್ಲಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಕುಡುಕ
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಲೀವಿಂಗ್ ಟುಗೆದರ್‍ನಲ್ಲಿದ್ದ ಸಾಫ್ಟ್‍ವೇರ್ ಎಂಜಿನಿಯರ್ ಜೊತೆ ಜಗಳ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಸುದ್ದಿ ತಿಳಿದು ಕೋರಮಂಗಲ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಸೇಂಟ್‍ಜಾನ್ ಆಸ್ಪತ್ರೆಗೆ ರವಾನಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.