ಕೊಚ್ಚಿ.ಜ.30-ಶಾರ್ಜಾದಿಂದ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯದಿಂದ ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ರಾತ್ರಿ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು.
ಆತಂಕದ ನಡುವೆ ವಿಮಾನವು ರಾತ್ರಿ 8:26ಕ್ಕೆ ಸುರಕ್ಷಿತವಾಗಿ ಇಳಿದಿದೆ ಶಾರ್ಜಾದಿಂದ ಕೊಚ್ಚಿಗೆ ಬರುತ್ತಿದ್ದ ಏರ್ ಇಂಡಿಯ-412 ವಿಮಾನದ ಪೈಲಟ್ ಚಕ್ರದ ಹೈಡ್ರಾಲಿಕ್ ವೈಫಲ್ಯಕಂಡುಬಂದ ಹಿನ್ನಲೆಯಲ್ಲಿ ವಿಮಾನ ನಿಲ್ದಾಣ ನಿಯಂತ್ರಣ (ಎಟಿಸಿ ) ಗಮನಕ್ಕೆ ತಂದರು. ಕೂಡಲೆ ರಾತ್ರಿ 8:04ಕ್ಕೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತುಸ್ಥಿತಿ ಘೋಷಿಸಲಾಯಿತು.
ಹುತಾತ್ಮ ವಿಂಗ್ ಕಮಾಂಡರ್ ಹನುಮಂತರಾವ್ ಅವರಿಗೆ ಸರ್ಕಾರೀ ಗೌರವಗಳೊಂದಿಗೆ ವಿದಾಯ
ಅದೃಷ್ಠವೆಂಬಂತೆ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಯಿತು ಎಂದು ಕೊಚ್ಚಿ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ರನ್‍ವೇ ಬಳಿಯೂ ಯಾವುದೇ ಸಮಸ್ಯೆ ಆಗಿಲ್ಲ. ನಂತರ ವಿಮಾನ ನಿಲ್ದಾಣದ ಕಾರ್ಯಾಚರಣೆಗೂ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಪರ ಗಟ್ಟಿ ಅಲೆ ಇದೆ : ಬೊಮ್ಮಾಯಿ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ವಕ್ತಾರರು, ಶಾರ್ಜಾ-ಕೊಚ್ಚಿ ವಿಮಾನವು ತುರ್ತು ಭೂಸ್ಪರ್ಶ ಮಾಡಿಲ್ಲ ಸಹಜವಾಗಿ ಇಳಿದಿದೆ ಎಂದಿದ್ದಾರೆ.
Air India, flight, emergency, landing, Cochin, airport,