ಎಂಜಿನ್‍ನಲ್ಲಿ ಬೆಂಕಿ : ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

Social Share

ಅಬುದಾಬಿ, ಫೆ.3- ಏರ್ ಇಂಡಿಯಾ ವಿಮಾನದ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ತುರ್ತು ಭೂಸ್ಪರ್ಶ ಮಾಡಲಾಗಿದೆ. ಅಬುದಾಬಿಯಿಂದ ಕ್ಯಾಲಿಕಟ್‍ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಒಂದು ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ವಿಮಾನವು ನಿಲ್ದಾಣಕ್ಕೆ ಹಿಂದಿರುಗಿದೆ. ಯಾವುದೇ ಅಪಾಯ ಪ್ರಕರಣಗಳು ಜರುಗಿಲ್ಲದ ಕಾರಣ ಆತಂಕ ದೂರವಾಗಿದೆ.

ಏರ್ ಇಂಡಿಯಾ ಎಕ್ಸ್‍ಪ್ರೆಸ್ ವಿಮಾನದ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಬುದಾಬಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಡೈರೆಕ್ಟರ್ ಜನರಲ್ ಆಫ್ ಸಿವಿಲ್ ಏವಿಯೇಷನ್ ಹೇಳಿದೆ.

ಖ್ಯಾತ ಹಿರಿಯ ನಟ ಕಾಸಿನಾಧುನಿ ವಿಶ್ವನಾಥ್ ಇನ್ನಿಲ್ಲ

ಏರ್ ಇಂಡಿಯಾ ಎಕ್ಸ್‍ಪ್ರೆಸ್ ಬಿ737- 800 ವಿಮಾನ ವಿಟಿಎವೈಸಿ ಆಪರೇಟಿಂಗ್ ಫ್ಲೈಟ್-ಐ್ಡ348 (ಅಬುದಾಬಿ ಕ್ಯಾಲಿಕಟ್) ನಂ.1 ಎಂಜಿನ್ ಫ್ಲಾಮ್‍ಔಟ್‍ನಿಂದ ಏರ್‍ಟರ್ನ್ ಬ್ಯಾಕ್‍ನಲ್ಲಿ ಸಾವಿರ ಅಡಿಗಳ ಎತ್ತರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ.

ಕೂಡಲೇ ವಿಮಾನವು ಅಬುದಾಬಿ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಹಿಂದಿರುಗಿತು. ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್‍ಪ್ರೆಸ್ ತಿಳಿಸಿದೆ.
ಒಂದು ವಾರದಲ್ಲಿ ಏರ್ ಇಂಡಿಯಾ ಎಕ್ಸ್‍ಪ್ರೆಸ್ ವಿಮಾನವನ್ನು ತುರ್ತು ಭೂ ಸ್ಪರ್ಶ ಮಾಡಿದ ಎರಡನೆ ಘಟನೆ ಇದಾಗಿದೆ.

ಹುಟ್ಟುವ ಪ್ರತಿ ಮಗುವಿಗೆ 100 ಗಿಡ ನೆಡುವ ಅಭಿಯಾನಕ್ಕೆ ಚಾಲನೆ

ಜ.29ರಂದು ತಾಂತ್ರಿಕ ತೊಂದರೆ ಹಿನ್ನೆಲೆಯಲ್ಲಿ ಶಾರ್ಜಾದಿಂದ ಏರ್ ಇಂಡಿಯಾ ಎಕ್ಸ್‍ಪ್ರೆಸ್ ವಿಮಾನವು ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಶಂಕಿತ ಹೈಡ್ರಾಲಿಕ್ ವೈಫಲ್ಯದ ಕಾರಣ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿತ್ತು. ಅಂದು ಕೂಡ ಯಾವುದೇ ತೊಂದರೆಯಾಗದಂತೆ ಪ್ರಯಾಣಿಕರು ಸುರಕ್ಷಿತವಾಗಿದ್ದರು.

Air India, Express, plane, emergency, landing, engine caught fire, during climb,

Articles You Might Like

Share This Article