ಅಹಮದಾಬಾದ್, ಜೂ. 19- ಇಲ್ಲಿನ ಮೇಘನಿ ನಗರದಲ್ಲಿ ಪತನವಾದ ಏರ್ ಇಂಡಿಯಾ ಬೋಯಿಂಗ್-787 ವಿಮಾನದ ಬ್ಲ್ಯಾಕ್ ಬಾಕ್ಸ್ ಅನ್ನು ಡೇಟಾ ರಿಕವರಿಗಾಗಿ ಅಮೆರಿಕಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.ವಿಮಾನದ ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್‌ಗೆ ಬೆಂಕಿ ಬಿದ್ದು ಬಾಹ್ಯವಾಗಿ ಹಾನಿ ಯಾದ ಹಿನ್ನೆಲೆ ಅಮೆರಿಕಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜೂನ್ 13ರಂದು ಬಿಜೆ ಮೆಡಿಕಲ್ ಹಾಸ್ಟೆಲಿನ ಮೇಲ್ಛಾವಣಿಯಲ್ಲಿದ್ದ ಏರ್ ಇಂಡಿಯಾ ವಿಮಾನದ ಬ್ಲ್ಯಾಕ್ ಬಾಕ್ಸ್ ಅನ್ನು ವಿಮಾನ ಅಪಘಾತ ತನಿಖಾ ಬ್ಯೂರೋ ವಶಪಡಿಸಿಕೊಂಡಿತ್ತು. ಆದ್ರೆ ಬ್ಲ್ಯಾಕ್ ಬಾಕ್ಸ್ ಗೆ ಬೆಂಕಿ ಬಿದ್ದು ಬಾಹ್ಯವಾಗಿ ಹಾನಿಯಾಗಿದೆ. ಇದರಿಂದ ಸ್ಥಳೀಯ ತನಿಖಾಧಿಕಾರಿಗಳಿಂದ ಮಾಹಿತಿ ಹೊರ ತೆಗೆಯಲು ಸಾಧ್ಯವಾಗಿಲ್ಲ. ಈ ಹಿನ್ನೆಲೆ ಡೇಟಾ ರಿಕವರಿಗಾಗಿ ಬ್ಲ್ಯಾಕ್‌ಬಾಕ್‌್ಸ ಅನ್ನು ಅಮೆರಿಕಾಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಏರ್ ಇಂಡಿಯಾ ಬೋಯಿಂಗ್-787 ವಿಮಾನದ 2ನೇ ಬ್ಲ್ಯಾಕ್ ಬಾಕ್ಸ್ (ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡ) ಕಳೆದ ಭಾನುವಾರ ಪತ್ತೆಯಾಗಿತ್ತು. ಇದು ಕಾಕ್‌ಪಿಟ್ ವಾಯ್‌್ಸ ರೆಕಾರ್ರ್ಡ ಆಗಿದ್ದು, ವಿಮಾನದಲ್ಲಿ ಪ್ರತಿ ಸೆಕೆಂಡ್‌ನಲ್ಲಿ ಏನಾಯ್ತು ಎಂಬುದನ್ನ ಅರ್ಥಮಾಡಿಕೊಳ್ಳಲು ಸಹಾಯಕವಾಗಲಿದೆ. ಇದು ಕಾಕ್‌ಪಿಟ್ ಮತ್ತು ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎಂಬುದರ ಕುರಿತು ವಸ್ತುನಿಷ್ಠ ಮಾಹಿತಿಯನ್ನು ನೀಡುತ್ತದೆ.
ಎಲ್ಲಾ ಕಾಕ್‌ಪಿಟ್ ಆಡಿಯೋ, ಪೈಲಟ್ ಸಂಭಾಷಣೆಗಳು, ರೇಡಿಯೋ ಪ್ರಸರಣಗಳು ಹಾಗೂ ಇತರೇ ಯಾಂತ್ರಿಕ ಶಬ್ಧಗಳ ಮಾಹಿತಿಯನ್ನು ಸಂಗ್ರಹಿಸಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ ತಿಳಿಸಿದ್ದರು. ಸದ್ಯ 2ನೇ ಬ್ಲ್ಯಾಕ್‌ಬಾಕ್‌್ಸ ಅನ್ನು ಭಾರತದಲ್ಲೇ ಪರಿಶೀಲಿಸಲಾಗುತ್ತಿದೆ.
ವಿಮಾನ ಅಪಘಾತವಾದಾಗ ಅದಕ್ಕೆ ಕಾರಣ ಪತ್ತೆ ಹಚ್ಚಲು ನೆರವಾಗಲೆಂದೇ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಭದ್ರತೆಯ ದೃಷ್ಟಿಯಿಂದ ಕಪ್ಪು ಪೆಟ್ಟಿಗೆಯನ್ನು ಸಾಮಾನ್ಯವಾಗಿ ವಿಮಾನದ ಹಿಂಭಾಗದಲ್ಲಿ ಇಡಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ, ಸುತ್ತಲೂ ಬೆಂಕಿ ಇದ್ದರೂ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಆಘಾತವನ್ನು ತಡೆದುಕೊಳ್ಳುವ ಶಕ್ತಿಯನ್ನು ಹೊಂದಿದೆ.
ಅಪಘಾತದ ಸಂಭವಿಸಿದಾಗ ಹಿಂಭಾಗದಲ್ಲಿ ಅದರಲ್ಲೂ ಬಾಲದ ಕಡೆ ಪೆಟ್ಟು ಬೀಳುವುದು ಕಡಿಮೆ. ಯಾಕೆಂದರೆ ಬಾಲ ಎತ್ತರದಲ್ಲಿರುತ್ತದೆ. ಈ ಕಾರಣಕ್ಕೆ ಬಾಲದಲ್ಲಿ ಅಳವಡಿಸಲಾಗಿರುತ್ತದೆ. ವಿಮಾನದ ಎಂಜಿನ್‌ಗೆ ಜೋಡಿಸಲಾದ ಜನರೇಟರ್ ನಿಂದ ಬ್ಲ್ಯಾಕ್ ಬಾಕ್ಸ್ ಚಾರ್ಜ್ ಆಗುತ್ತದೆ.
- ಒಂದೇ ಗಂಟೆಯಲ್ಲಿ ಡಿಸಿಇಟಿ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟ
- ವಿಮಾನ ನಿಲ್ದಾಣಗಳ ಸುತ್ತಮುತ್ತ ಪ್ರದೇಶಗಳಿಗೆ ಬರಲಿದೆ ಹೊಸ ರೂಲ್ಸ್
- ಅಮೆರಿಕ ಕನ್ನಡ ಒಕ್ಕೂಟಗಳಿಂದ ಕಮಲ್ ಹಾಸನ್ ಚಿತ್ರಗಳಿಗೆ ಬಹಿಷ್ಕಾರ
- ಗೊಂದಲದ ಗೂಡಾದ ಬಿಜೆಪಿ- ಜೆಡಿಎಸ್ ಮೈತ್ರಿ
- ದೊಡ್ಡ ವರ್ಗವನ್ನು ಅಂಚಿನಲ್ಲಿಡುವ ಅಸಮಾನತೆ ಪರಿಹರಿಸದಿರುವ ರಾಷ್ಟ್ರ ಪ್ರಗತಿಪರ ಅಲ್ಲ ; ಸಿಜೆಐ