ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ -ಅಖಿಲೇಶ್ ಯಾದವ್ ಭೇಟಿ

Social Share

ಕೋಲ್ಕತ್ತಾ,ಮಾ.13- ಪಶ್ಚಿಮ ಬಂಗಾಳದಲ್ಲಿ ತಮ್ಮ ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುವ ಪಕ್ಷದ ಅಧಿನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮಾರ್ಚ್ 17ರಂದು ಟಿಎಂಸಿ ಅಧಿನಾಯಕಿ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಲಿದ್ದಾರೆ.

ಮಾರ್ಚ್ 18 ರಿಂದ ಕೋಲ್ಕತ್ತಾದಲ್ಲಿ ಸಮಾಜವಾದಿ ಪಕ್ಷದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ವರ್ಷದ ಕೊನೆಯಲ್ಲಿ ಮೂರು ಉತ್ತರ ಭಾರತದ ಮೂರು ಪ್ರಮುಖ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತ್ತು 2024 ರಲ್ಲಿ ಲೋಕಸಭೆ ಚುನಾವಣೆ ನಡೆಯಲಿವೆ, ಈ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ನೀತಿಗಳು ಮತ್ತು ಕಾರ್ಯತಂತ್ರಗಳನ್ನು ಚರ್ಚಿಸಲು ಉಭಯ ನಾಯಕರು ಭೇಟಿಯಾಗಲಿದ್ದಾರೆ.

ಮಮತಾ ಬ್ಯಾನರ್ಜಿ ಅವರನ್ನು ಅವರ ನಿವಾಸಕ್ಕೆ ಮಾರ್ಚ್ 7ಕ್ಕೆ ಅಖಿಲೇಶ್ ಯಾದವ್ ಭೇಟಿ ನೀಡಲಿದ್ದಾರೆ. ಇದು ಸೌಜನ್ಯದ ಭೇಟಿಯಾಗಿದೆ. ಆದರೆ ಪರಸ್ಪರ ಭೇಟಿಯಾದಾಗ ನಾಯಕರು ದೇಶದ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸುತ್ತಾರೆ ಎಂದು ಸಮಾಜವಾದಿ ಪಕ್ಷ ಉಪಾಧ್ಯಕ್ಷ ಕಿರಣ್‍ಮೋಯ್ ನಂದಾ ಹೇಳಿದ್ದಾರೆ.

ಆಸ್ಕರ್ ಅಂಗಳದಲ್ಲಿ ಭಾರತೀಯ ಚಿತ್ರಗಳ ಸದ್ದು, ಇಲ್ಲಿದೆ ಪ್ರಶಸ್ತಿಗಳ ಕಂಪ್ಲೀಟ್ ಡೀಟೇಲ್ಸ್

ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಕೂಡ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ. ಕೇಂದ್ರೀಯ ತನಿಖಾ ಸಂಸ್ಥೆಗಳು ವಿರೋಧ ಪಕ್ಷಗಳಿಗೆ ನೀಡುತ್ತಿರುವ ಕಿರುಕುಳವನ್ನು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸುವ ಸಾಧ್ಯತೆ ಇದೆ.

ಬ್ಯಾನರ್ಜಿ ಮತ್ತು ಯಾದವ್ ಮೊದಲಿನಿಂದಲೂ ಸೌಹಾರ್ದ ಸಂಬಂಧ ಹೊಂದಿದ್ದಾರೆ. 2021 ರ ಬಂಗಾಳ ವಿಧಾನಸಭಾ ಚುನಾವಣೆಯ ಸಮಯದಲ್ಲಿ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಟಿಎಂಸಿಗೆ ಸಂಪೂರ್ಣ ಬೆಂಬಲ ಘೋಷಿಸಿತ್ತು.

ಐಪಿಎಸ್ ಅಧಿಕಾರಿಯೊಂದಿಗೆ ಶಿಕ್ಷಣ ಸಚಿವರ ವಿವಾಹ

ಇದಕ್ಕೆ ಪ್ರತಿಯಾಗಿ 2022ರ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ ವೇಳೆ ಮಮತಾ ಬ್ಯಾನರ್ಜಿಯವರು ಸಮಾಜವಾದಿ ಪಕ್ಷದ ಪರವಾಗಿ ಪ್ರಚಾರ ನಡೆಸಿದ್ದರು. 11 ವರ್ಷಗಳ ನಂತರ ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಕೋಲ್ಕತ್ತಾದಲ್ಲಿ ನಡೆಯಲಿದ್ದು, ಈ ವೇಳೆ ರಾಷ್ಟ್ರ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಘಟಿಸಲಿದೆ ಎಂದು ಹೇಳಲಾಗಿದೆ.

Akhilesh Yadav, meet, Mamata Banerjee, March 17,

Articles You Might Like

Share This Article