Saturday, April 26, 2025
Homeರಾಜ್ಯಮಲೈಮಹದೇಶ್ವರ ಬೆಟ್ಟದಲ್ಲಿ ಮದ್ಯಪಾನ ನಿಷೇಧ

ಮಲೈಮಹದೇಶ್ವರ ಬೆಟ್ಟದಲ್ಲಿ ಮದ್ಯಪಾನ ನಿಷೇಧ

Alcohol ban in Malaimahadeshwar hills

ಚಾಮರಾಜನಗರ, ಏ.25- ಬಿಜೆಪಿಯ ಯಾವ ಮುಖಂಡರುಗಳ ಮೇಲೂ ಜಾರಿ ನಿರ್ದೇಶನಾಲಯದ ದಾಳಿಯಾಗುವುದಿಲ್ಲ. ಆದರೆ ಕಾಂಗ್ರೆಸ್ಸಿಗರ ಮೇಲೆ ಮಾತ್ರ ಪದೇಪದೇ ಕಾರ್ಯಾಚರಣೆಗಳು ನಡೆಯುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಸಿಡಿಮಿಡಿ ವ್ಯಕ್ತಪಡಿಸಿದರು. ಮಲೈಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌‍ ಶಾಸಕ ವಿನಯ್‌ ಕುಲಕರ್ಣಿಯವರ ಮನೆಯ ಮೇಲೆ ಇ.ಡಿ. ದಾಳಿಯಾಗಿರುವ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಕೇಂದ್ರ ಸರ್ಕಾರ ದ್ವೇಷದ ರಾಜಕಾರಣಕ್ಕಾಗಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಳ್ಳುತ್ತಿದೆ. ಬಿಜೆಪಿಯವರ ಮೇಲೆ ಯಾವುದೇ ಇ.ಡಿ. ದಾಳಿ ಆಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಧಾನಿ ಮೋದಿಯವರು ಕಾಶೀರ ಉಗ್ರರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ಹೇಳಿದ್ದಾರೆ. ಆದರೆ ಪಹಲ್ಗಾಮ್‌ನ ದಾಳಿಯಲ್ಲಿ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವಿರುವುದು ಕಾಣುತ್ತಿದೆ ಎಂದರು.

ನಿನ್ನೆ ನಡೆದ ಮಲೈಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾ ಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದರು.

ಮಲೈಮಹದೇಶ್ವರ ಅಭಿವೃದ್ಧಿಗೆ ನಿರ್ಣಯ: ಮಲೈಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆ ನಿನ್ನೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯನಿಷೇದವಾಗಬೇಕು, ದೇವಸ್ಥಾನದ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಮಲೈಮಹದೇಶ್ವರ ಸನ್ನಿಧಿಯ ಸುತ್ತಮುತ್ತಲ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ ಎಂದು ತಿಳಿಸಿದರು.

RELATED ARTICLES

Latest News