ಇಸ್ಲಾಮಾಬಾದ್, ಜು. 2- ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧೀಖಾನೆಯಲ್ಲೇ ಹತ್ಯೆ ಮಾಡಲು ಸಂಚು ನಡೆಸಲಾಗುತ್ತಿದೆ ಎಂದು ಅವರ ಸಹೋದರಿ ಅಲೀಮಾ ಖಾನ್ ಆರೋಪಿಸಿದ್ದಾರೆ.
ನನ್ನ ಸಹೋದರ ಇಮ್ರಾನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಉದ್ದೇಶಪೂರ್ವಕವಾಗಿ ಮುಂದೂಡಲಾಗುತ್ತಿದೆ. ಜೈಲಿನಲ್ಲಿರುವ ಸಾಮಾನ್ಯ ಕೈದಿಗಳಿಗೆ ಲಭ್ಯವಿರುವ ಸೌಲಭ್ಯಗಳನ್ನು ಇಮ್ರಾನ್ ಖಾನ್ ಅವರಿಗೆ ನೀಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಕುಟುಂಬ ಸದಸ್ಯರಿಗೆ ಇಮ್ರಾನ್ ಖಾನ್ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಾಗುತ್ತಿಲ್ಲ, ಅವರ ವಕೀಲರನ್ನು ಜೈಲಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಇಮ್ರಾನ್ ಅವರ ಸಹೋದರಿಯರಾದ ಅಲೀಮಾ ಖಾನ್ ಮತ್ತು ಉಜ್ಮಾ ಖಾನ್ ನಿನ್ನೆ ಕೂಡ ರಾವಲ್ಪಿಂಡಿಯ ಅಡಿಯಾಲಾ ಜೈಲಿಗೆ ಹೋಗಿದ್ದರು.ಆದರೆ ಅವರಿಗೆ ಇಮ್ರಾನ್ ಖಾನ್ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಾಗಿಲ್ಲ ಎಂದು ವರು ಹೇಳಿದ್ದಾರೆ.
ಜನರಲ್ ಅಸಿಮ್ ಮುನೀರ್ ಪಾಕಿಸ್ತಾನದಲ್ಲಿ ಅಘೋಷಿತ ಸಮರ ಕಾನೂನನ್ನು ಹೇರಿದ್ದಾರೆ ಎಂದು ಅಲಿಮಾ ಖಾನ್ ಹೇಳಿದ್ದಾರೆ. ನ್ಯಾಯಾಂಗವು ಸಂಪೂರ್ಣವಾಗಿ ಸರ್ಕಾರ ಮತ್ತು ಸೈನ್ಯದ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದೆ. ಇಮ್ರಾನ್ ಖಾನ್ ಅವರನ್ನು ರಾಜಕೀಯವಾಗಿ ಸಂಪೂರ್ಣವಾಗಿ ನಾಶಮಾಡಲು ಪಿತೂರಿ ನಡೆಯುತ್ತಿದೆ.
ಇಮ್ರಾನ್ ಅವರನ್ನು ಜೈಲಿನಲ್ಲಿ ಚಿತ್ರಹಿಂಸೆ ನೀಡಲಾಗುತ್ತಿದೆ. ನ್ಯಾಯಾಲಯದ ಆದೇಶದ ಮೇರೆಗೆ, ಇಮ್ರಾನ್ ಖಾನ್ ಅವರ ಸೆಲ್ನಲ್ಲಿ ಫ್ಯಾನ್ ಮತ್ತು ಕೂಲರ್ ಅಳವಡಿಸಲಾಗಿದೆ, ಆದರೆ ವಿದ್ಯುತ್ ಸರಬರಾಜು ಕಡಿತಗೊಂಡಿದೆ ಎಂದಿದ್ದಾರೆ. ವಕೀಲರು ಅಥವಾ ವೈದ್ಯರು ಇಮ್ರಾನ್ ಅವರನ್ನು ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಅವರು ಆರೋಪಿಸಿದ್ದಾರೆ. ಯಾವಾಗ ಏನಾಗುತ್ತೋ ಎಂದು ಹೇಳಲು ಸಾಧ್ಯವಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-08-2025)
- ಪಾಕ್ ಪ್ರವಾಹದಲ್ಲಿ 220 ಜನ ಬಲಿ
- ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ 5.8 ತೀವ್ರತೆಯ ಭೂಕಂಪ
- ಪೀಣ್ಯ ಫ್ಲೈ ಓವರ್ ಮೇಲೆ ಅಪಘಾತ, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಸಾವು
- ಧರ್ಮಸ್ಥಳದ ಅಪಪ್ರಚಾರ ಪಿತೂರಿ ಮಾಡಿದವರ ವಿರುದ್ಧ ತನಿಖೆಗೆ ಬಿವೈವಿ ಆಗ್ರಹ