Tuesday, May 7, 2024
Homeರಾಜ್ಯ70ನೇ ಸಹಕಾರ ಸಪ್ತಾಹ ಸರಳ ಆಚರಣೆ : ಕೆ.ಎನ್.ರಾಜಣ್ಣ

70ನೇ ಸಹಕಾರ ಸಪ್ತಾಹ ಸರಳ ಆಚರಣೆ : ಕೆ.ಎನ್.ರಾಜಣ್ಣ

ಬೆಂಗಳೂರು, ಅ.9- ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇರುವುದರಿಂದ 70ನೆ ಅಖಿಲ ಭಾರತ ಸಹಕಾರಿ ಸಪ್ತಾಹವನ್ನು ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ಸಹಕಾರ ಸಪ್ತಾಹದ ಪೂರ್ವಸಿದ್ಧತಾ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿಯಿಂದಾಗಿ ಸಪ್ತಾಹವನ್ನು ಅದ್ಧೂರಿಯಾಗಿ ಆಚರಿಸಲಾಗದು.

ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯರನ್ನು ಗುರುತಿಸಿ ಸಹಕಾರ ರತ್ನ ಪ್ರಶಸ್ತಿ ನೀಡಲು ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ರಾಜ್ಯದ ವಿವಿಧ ಭಾಗಗಳಲ್ಲಿ ಸಹಕಾರಿ ಸಪ್ತಾಹ ಆಚರಣೆ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.

ಆಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಶುಭಮನ್‍ ಗಿಲ್ ಅಲಭ್ಯ

ಒಂದು ತಿಂಗಳಲ್ಲಿ ವರದಿ: ಸಹಕಾರಿ ಸಂಸ್ಥೆಗಳಲ್ಲಿ ನಡೆದಿರುವ ಅವ್ಯವಹಾರ ಹಾಗೂ ಠೇವಣಿದಾರರ ಹಿತ ಕಾಪಾಡುವ ಉದ್ದೇಶದಿಂದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿ ಇನ್ನೊಂದು ಇನ್ನೊಂದು ತಿಂಗಳಲ್ಲಿ ವರದಿ ಕೊಡಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ರಾಜಣ್ಣ ತಿಳಿಸಿದರು.

ಸಹಕಾರಿ ಸಂಸ್ಥೆಗಳಲ್ಲಿ ನಡೆದಿರುವ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ರೈತರ ಹಾಗೂ ಠೇವಣಿದಾರರ ಹಿತ ಕಾಪಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇವರಿಗೆ ಅನ್ಯಾಯ ಮಾಡಿದವರಿಗೆ ಶಿಕ್ಷೆಯಾಗಬೇಕು ಎಂಬುದು ಸರ್ಕಾರದ ಉದ್ದೇಶ. ಬಹಳಷ್ಟು ಸಂಸ್ಥೆಗಳು ಒಳ್ಳೆಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸರ್ಕಾರಿ ವಲಯದಲ್ಲಿ ಡಿಜಿಟಲೀಕರಣ ಮಾಡುವುದರಿಂದ ಪಾರದರ್ಶಕತೆ ತರಬಹುದು, ದುರ್ಬಳಕೆ ತಡೆಯಬಹುದು. ಹೀಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮವನ್ನು ಸ್ವಾಗತಿಸುತ್ತೇವೆ ಎಂದರು. ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡರು ಮಾತನಾಡಿ, ನವೆಂಬರ್ 14 ರಿಂದ 20ರ ವರೆಗೆ 70ನೆ ಅಖಿಲ ಭಾರತ ಸಪ್ತಾಹವನ್ನು ಹಮ್ಮಿಕೊಳ್ಳಲಾಗುವುದು.

ಸಪ್ತಾಹದ ಮುಖ್ಯ ಧ್ಯೇಯ 5 ಟ್ರಿಲಿಯನ್ ಡಾಲರ್. ಆರ್ಥಿಕತೆ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳು ಎಂಬುದಾಗಿ ಘೋಷಿಸಲಾಗಿದೆ. ಪ್ರತಿದಿನವೂ ಒಂದೊಂದು ಶೀರ್ಷಿಕೆಯಡಿ ಏಳು ದಿನವೂ ರಾಜ್ಯದ ವಿವಿಧೆಡೆ ಸಪ್ತಾಹ ಆಚರಿಸಲಾಗುವುದು. ನವೆಂಬರ್ 14ರಂದು ಸಹಕಾರ ಸಂಘಸಂಸ್ಥೆಗಳಲ್ಲಿನ ಇತ್ತೀಚಿನ ಬೆಳವಣಿಗೆಗಳು, ನವೆಂಬರ್ 15ರಂದು ಸಾಲೇತರ ಸಹಕಾರ ಸಂಘಗಳ ಪುನಶ್ಚೇತನ ಹಾಗೂ ಆರ್ಥಿಕ ಸೇರ್ಪಡೆ, ನ.16ರಂದು ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ತಾಂತ್ರಿಕತೆಯ ಅಳವಡಿಕೆ ಮತ್ತು ಉನ್ನತೀಕರಣ ವಿಚಾರದ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಟಾಸ್ ಗೆದ್ದು ಬ್ಯಾಟ್ ಮಾಡಿದ್ದೇ ಆಸ್ಟ್ರೇಲಿಯಾ ಸೋಲಿಗೆ ಕಾರಣ

ನ.17ರಂದು ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳು, ನ.18ರಂದು ಸಾರ್ವಜನಿಕ-ಖಾಸಗಿ-ಸಹಕಾರಿ ಸಹಭಾಗಿತ್ವವನ್ನು ಬಲಪಡಿಸುವುದು, ನ.19ರಂದು ಮಹಿಳೆಯರು, ಯುವಜನ ಮತ್ತು ಅಬಲ ವರ್ಗಕ್ಕೆ ಸಹಕಾರ ಸಂಸ್ಥೆಗಳು, ನ.20ರಂದು ಸಹಕಾರ ಶಿಕ್ಷಣ ಮತ್ತು ತರಬೇತಿಯ ಪರಿಷ್ಕರಣೆ ಶೀರ್ಷಿಕೆಯಡಿ ಕಾರ್ಯಕ್ರಮ ನಡೆಯಲಿದೆ ಎಂದರು.

ಸಹಕಾರ ಸಪ್ತಾಹದಲ್ಲಿ ಎಲ್ಲ ಸಹಕಾರಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು. ಸಹಕಾರ ಸಪ್ತಾಹದ ಉದ್ಘಾಟನೆ, ಸಮಾರೋಪ ಹಾಗೂ ವಿವಿಧ ಕಾರ್ಯಕ್ರಮಗಳ ಸ್ಥಳವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ತಿಳಿಸಿದರು.

RELATED ARTICLES

Latest News