ಹೈದರಾಬಾದ್, ಜ 5 (ಪಿಟಿಐ) – ಜಾಮೀನಿನ ಷರತ್ತಿನಂತೆ ಇಂದು ಖ್ಯಾತ ಚಿತ್ರನಟ ಅಲ್ಲು ಅರ್ಜುನ್ ಅವರು ಪೊಲೀಸರ ಮುಂದೆ ಹಾಜರಾಗಿದ್ದರು.ಪುಷ್ಪ 2 ಚಿತ್ರ ಪ್ರದರ್ಶನದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಅಲ್ಲು ಅವರು ಹೈದರಾಬಾದ್‌ನ ಪೊಲೀಸರ ಮುಂದೆ ಹಾಜರಾಗಿದ್ದಾರೆ.
ಪ್ರಕರಣದಲ್ಲಿ ಬಂಧಿತರಾಗಿದ್ದ ಅಲ್ಲು ಅವರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಆ ಸಂದರ್ಭದಲ್ಲಿ ನ್ಯಾಯಾಲಯ ಪ್ರತಿ ಭಾನುವಾರ ಆರೋಪಿ ಪೊಲೀಸರ ಮುಂದೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು.ಇದರ ಜೊತೆಗೆ ಅಲ್ಲು ಅರ್ಜುನ್ ತಮ ವಿಳಾಸ ಬದಲಿಸಬಾರದು ಎಂದು ಸೂಚನೆ ನೀಡಿತ್ತು. ನ್ಯಾಯಾಲಯದ ಆದೇಶದ ಪ್ರಕಾರ ಇಂದು ಅಲ್ಲು ಅರ್ಜುನ್ ಪೊಲೀಸರ ಮುಂದೆ ಹಾಜರಾಗಿ ಸಹಿ ಹಾಕಿದ್ದಾರೆ.
ಡಿಸೆಂಬರ್ 4 ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ಪ್ರೀಮಿಯರ್‌ನಲ್ಲಿ ನಟನನ್ನು ನೋಡಲು ಅಭಿಮಾನಿಗಳು ಜಮಾಯಿಸಿದಾಗ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಯಿತು. 35 ವರ್ಷದ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದು, ಅವರ ಎಂಟು ವರ್ಷದ ಮಗ ತೀವ್ರವಾಗಿ ಗಾಯಗೊಂಡಿದ್ದಾನೆ.
ದುರಂತದ ನಂತರ ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಥಿಯೇಟರ್ ಆಡಳಿತದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು. ಮತ ಮಹಿಳೆಯ ಕುಟುಂಬದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 13 ರಂದು ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಆದಾಗ್ಯೂ, ತೆಲಂಗಾಣ ಹೈಕೋರ್ಟ್ ಡಿಸೆಂಬರ್ 14 ರಂದು ಅವರಿಗೆ ಮಧ್ಯಂತರ ಜಾಮೀನು ನೀಡಿತು, ಅದು ಜನವರಿ 10 ರಂದು ಮುಕ್ತಾಯಗೊಳ್ಳಲಿದೆ.