Sunday, September 15, 2024
Homeರಾಜ್ಯಕಾರ್ಕಳದಲ್ಲಿ ಮತ್ತುಬರಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಅಲ್ತಾಫ್‌ ಅರೆಸ್ಟ್

ಕಾರ್ಕಳದಲ್ಲಿ ಮತ್ತುಬರಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಅಲ್ತಾಫ್‌ ಅರೆಸ್ಟ್

ಬೆಂಗಳೂರು,ಆ.24- ದೇಶದ್ಯಾಂತ ಭಾರೀ ಸದ್ದು ಮಾಡಿದ್ದ ಕೋಲ್ಕತ್ತಾದ ಆರ್‌ಜಿಕರ್‌ ಅಸ್ಪತ್ರೆಯ ತರಬೇತಿ ನಿರತ ವೈದ್ಯೆಯ ಸಾಮೂಹಿಕ ಅತ್ಯಾಚಾರ ಬೆನ್ನಲ್ಲೇ ಇದೀಗ ಉಡುಪಿಯಲ್ಲಿ ಮತ್ತೊಂದು ಅಂತಹದ್ದೇ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ
ಇನ್‌ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ ಹಿಂದೂ ಯುವತಿಯನ್ನು ಕರೆದೊಯ್ದ ಮುಸ್ಲಿಂ ಯುವಕ, ಆಕೆಗೆ ಬಿಯರ್ನಲ್ಲಿ ಮತ್ತುಭರಿಸುವ ಔಷಧ ಬೆರೆಸಿ ಅತ್ಯಾಚಾರ ಎಸಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.

ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್‌ ಬಂಧಿತ ಆರೋಪಿಯಾಗಿದ್ದಾನೆ. ಅರೋಪಿಗೆ ಬಿಯರ್‌ ಬಾಟಲ್‌ ತಂದುಕೊಟ್ಟಿದ್ದ ಇಬ್ಬರು ಆರೋಪಿಗಳ ಪೈಕಿ ಸುಬೇರ್‌ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊರ್ವ ಆರೋಪಿಗೆ ಬಲೆ ಬೀಸಲಾಗಿದೆ.

ಕೃತ್ಯಕ್ಕೆ ಬಳಸಿದ ವಾಹನವನ್ನು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಸಂತ್ರಸ್ತೆಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಯುವತಿಗೆ ಯಾವುದೇ ರೀತಿಯ ಪ್ರಾಣಾಪಾಯ ಇಲ್ಲ ಎಂದು ತಿಳಿದುಬಂದಿದೆ. ಆಘಾತಕ್ಕೆ ಒಳಗಾಗಿರುವ ಯುವತಿ ನಿಧನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಕರಣ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಯುವತಿ ಜೇನು ಕೃಷಿ ಇಲಾಖೆಯಲ್ಲಿ ಕೆಲಸಕ್ಕಿದ್ದಳು. ಇನ್‌ಸ್ಟಾಗ್ರಾಂನಲ್ಲಿ ಇವರಿಗೆ ಸ್ನೇಹ ಬೆಳೆದಿತ್ತು ಎನ್ನಲಾಗಿದೆ. ಅಲ್ತಾಫ್‌ ಮತ್ತು ಇಬ್ಬರ ವಿರುದ್ಧ ಕಾರಿನಲ್ಲಿ ಯುವತಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಆತ್ಯಾಚಾರ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಇದು ಅತ್ಯಾಚಾರ ಪ್ರಕರಣವಲ್ಲ. ಸಾಮೂಹಿಕ ಅತ್ಯಾಚಾರ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಹಿಂದೂ ಸಂಘಟನೆಗಳು ಎಂದು ಆಗ್ರಹಿಸಿವೆ.ಸಾಮೂಹಿಕ ಅತ್ಯಾಚಾರ ನಡೆದಿದೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ. ಪೋಷಕರ ಹೇಳಿಕೆಯಂತೆ ಅತ್ಯಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ವೈದ್ಯಕೀಯ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ಸಂತ್ರಸ್ತ ಯುವತಿಗೆ ಅಲ್ತಾಫ್‌ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ. ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು ಹೋಗಿದ್ದಾನೆ. ಇಬ್ಬರು ಸ್ನೇಹಿತರ ಕರೆಸಿ ಬಿಯರ್‌ ಬಾಟಲಿ ತರಿಸಿದ್ದ. ಬಿಯರ್ನಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪವಾಗಿದೆ.

ಪ್ರಕರಣ ಆಚೆ ಬರುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾವಣೆಗೊಂಡು ಯುವಕನ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಎಸ್‌‍ಪಿ ಹೇಳಿದ್ದೇನು?:
ಕರ್ಕಾಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನ ಅಪಹರಿಸಿ ಅತ್ಯಾಚಾರ ಮಾಡಿರುವ ಬಗ್ಗೆ ದೂರು ಬಂದಿದೆ. ಯುವತಿಗೆ ಅರೋಪಿ ಮೂರು ತಿಂಗಳಿಂದ ಇನ್‌್ಸಟಗ್ರಾಮ್‌ ಮೂಲಕ ಪರಿಚಯವಿತ್ತು. ಶುಕ್ರವಾರ ಆರೋಪಿ ಅಲ್ತಾಫ್‌ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಅಲ್ಲಿಂದ ಅಪಹರಿಸಿದ್ದ ಆರೋಪಿ ಮದ್ಯದಲ್ಲಿ ಏನನ್ನೋ ಬೆರೆಸಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆ ತಿಳಿಸಿದ್ದಾಳೆ.

ಸದ್ಯ ಸಂತ್ರಸ್ತೆ ಹೇಳಿಕೆ ಆಧರಿಸಿ ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್‌ ಬಾಟಲ್‌ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್‌ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನ ಸೀಜ್‌ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ್‌ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಾನೂನು ಕ್ರಮ ಜರುಗಿಸಲಾಗುವುದು ಜಿಲ್ಲಾ ಪೊಲೀಸ್‌‍ ವರಿಷ್ಟಧಿಕಾರಿ ಡಾ.ಅರುಣ್‌ ಕುಮಾರ್‌ ಹೇಳಿದ್ದಾರೆ.

RELATED ARTICLES

Latest News