ಶ್ರೀನಗರ, ಜು.6 (ಪಿಟಿಐ)- ಭಾರೀ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಇಂದು ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ರಾತ್ರಿಯಿಂದ ಬಲ್ತಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಮಧ್ಯಂತರ ಭಾರೀ ಮಳೆಯಾಗುತ್ತಿದೆ, ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
3,800 ಮೀಟರ್ ಎತ್ತರದ ಗುಹಾಂತರ ದೇಗುಲಕ್ಕೆ ಭೇಟಿ ನೀಡಿ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗದ ದರ್ಶನ ಪಡೆದ ಭಕ್ತರ ಸಂಖ್ಯೆ 1.50 ಲಕ್ಷ ದಾಟಿದೆ.ಅಮರನಾಥ ಯಾತ್ರೆಯು ಜೂನ್ 29 ರಂದು ಪ್ರಾರಂಭವಾದಿತ್ತಿ ಆಗಸ್ಟ್ 19 ರಂದು ಮುಕ್ತಾಯಗೊಳ್ಳಲಿದೆ.
ಕಳೆದ ವರ್ಷ 4.5 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಗುಹಾ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಭಾರಿ ಇನ್ನು ಹೆಚ್ಚಿನ ಭಕ್ತರ ಬರುವ ಸಾಧ್ಯತೆ ಇದೆ.