ಬೆಂಗಳೂರು,ಆ.13- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಳಿಯ ಹಾಗೂ ಉದ್ಯಮಿ ದಿವಂಗತ ಸಿದಾರ್ಥ್ ಅವರ ಪುತ್ರ ಅಮಾತ್ರ್ಯ ಹೆಗ್ಡೆ ಅವರನ್ನು ರಾಜಕೀಯಕ್ಕೆ ಕರೆತರುವ ಚರ್ಚೆಗಳು ನಡೆಯುತ್ತಿವೆ.ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮೊಮ್ಮಗನಾಗಿರುವ ಅಮಾತ್ರ್ಯ ಸದ್ಯ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ತಂದೆಯವರು ಸ್ಥಾಪಿಸಿದ ಸಂಸ್ಥೆಗಳನ್ನು ಮುನ್ನಡೆಸುತ್ತಿದ್ದಾರೆ.
ಅವರಿಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ ಎಂದು ಹೇಳಲಾಗುತ್ತಿದೆ. ಆದಾಗ್ಯೂ ಅವರ ತಾತ ಮತ್ತು ಮಾವ ಪ್ರಭಾವಿಗಳಾಗಿರುವುದರಿಂದ ಸೂಕ್ತ ಕಾಲದಲ್ಲಿ ರಾಜಕೀಯ ಪ್ರವೇಶ ಪಡೆದು ನೆಲೆ ಕಂಡುಕೊಳ್ಳುವುದು ಅಗತ್ಯ ಎಂಬ ಸಲಹೆಗಳು ಕೇಳಿಬಂದಿದ್ದು, ಈ ನಿಟ್ಟಿನಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರೆ, ಎಸ್.ಎಂ.ಕೃಷ್ಣ ಬಿಜೆಪಿಯಲ್ಲಿ ಪ್ರಭಾವಿ ನಾಯಕರಾಗಿದ್ದಾರೆ. ಅಮಾತ್ರ್ಯ ಅವರು ಯಾವ ಪಕ್ಷದಿಂದ ರಾಜಕೀಯ ರಂಗ ಪ್ರವೇಶ ಮಾಡುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ.ಬಿಜೆಪಿಯಿಂದ ರಾಜಕೀಯ ಆರಂಭಿಸುವುದಾದರೆ ಚಿಕ್ಕಮಗಳೂರು ಅಥವಾ ಮಂಡ್ಯ ಜಿಲ್ಲೆಗಳಲ್ಲಿ ಕಣಕ್ಕಿಳಿಯುವ ಬಗ್ಗೆ ವದಂತಿಗಳು ಹಬ್ಬಿವೆ. ಡಿ.ಕೆ.ಶಿವಕುಮಾರ್ ಅವರು ಅಳಿಯನನ್ನು ಮಂಡ್ಯದಿಂದಲೇ ಕಣಕ್ಕಿಳಿಸುವ ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ.
ಜೆಡಿಎಸ್ನ ಪ್ರಬಲ ಕೋಟೆಯಾಗಿರುವ ಮಂಡ್ಯದಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿಯವರ ಪುತ್ರ ನಿಖಿಲ್ ಸ್ಪರ್ಧೆ ಮಾಡಿದ್ದರು. ಸುಮಲತಾ ಅಲ್ಲಿ ಪಕ್ಷೇತರರಾಗಿ ಗೆಲುವು ಸಾಸಿದ್ದಾರೆ.ಅಮಾತ್ರ್ಯ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಿದ್ದೇ ಆದರೆ ಜೆಡಿಎಸ್ಗೆ ಪೈಪೊೀಟಿ ನೀಡಿದಂತಾಗುತ್ತದೆ ಎಂಬ ಲೆಕ್ಕಾಚಾರಗಳಿವೆ. ಬಿಜೆಪಿಯಿಂದ ಸ್ರ್ಪಸುವುದಾದರೆ ಚಿಕ್ಕಮಗಳೂರಿನಲ್ಲಿ ಅವಕಾಶ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.
ಅಮಾತ್ರ್ಯ ರಾಜಕೀಯ ಪ್ರವೇಶ ಮಾಡುತ್ತಾರೋ ಇಲ್ಲವೇ ಉದ್ಯಮದಲ್ಲೇ ಮುಂದುವರೆಯುತ್ತಾರೊ ಎಂಬ ಕುತೂಹಲಗಳು ಹೆಚ್ಚಾಗಿವೆ.