ಬೆಂಗಳೂರು,ಮೇ.29- ಕನ್ನಡ ಚಿತ್ರರಂಗದ ಹೆಸರಾಂತ ನಟ, ಅಭಿಮಾನಿಗಳ ಪಾಲಿಗೆ ನೆಚ್ಚಿನ ಮಂಡ್ಯದ ಗಂಡು ಎಂದೇ ಖ್ಯಾತಿಗಳಿಸಿರುವ ರೆಬಲ್ ಸ್ಟಾರ್ ಅಂಬರೀಷ್ ಗೆ ಇಂದು 71 ನೇ ಹುಟ್ಟು ಹಬ್ಬದ ಸಂಭ್ರಮ.
ಹುಟ್ಟುಹಬ್ಬದ ಈ ಸಮಯದಲ್ಲಿ ಸುಮಲತಾ ಅಂಬರೀಶ್ ಭಾವುಕ ಸಾಲು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಶೇರ್ ಮಾಡಿ, ಬಾಲ್ಯದ ಆ ತುಂಟತನ ನಿಮ್ಮಲ್ಲಿ ಕೊನೆವರೆಗೂ ಇತ್ತು. ಜತೆಗಿರದ ಜೀವ ಎಂದೆಂದಿಗೂ ಜೀವಂತ ಎಂದು ಹೇಳಿದ್ದಾರೆ.
ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ. ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು. ಹಾಗಾಗಿ ನಿಮ್ಮ ಹುಟ್ಟುಹಬ್ಬ ಅದೊಂದು ಸಡಗರವಾಗಿರುತ್ತಿತ್ತು. ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ. ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟುಹಬ್ಬವನ್ನೂ ಅಭಿಮಾನಿಗಳ ಜೊತೆಯಾಗಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸುತ್ತಿದ್ದೆವು. ಮನೆ ಮುಂದೆ ಜನಸಾಗರ, ನಿಮ್ಮ ಆರ್ಭಟ, ಹಾಸ್ಯ ಪ್ರಜ್ಞೆಯ ಮಾತು, ರಾತ್ರಿ ಇಡೀ ಕಾಯುತ್ತಾ ನಿಂತಿದ್ದ ಅಭಿಮಾನಿಗಳ ಘೋಷಣೆ ಇನ್ನೂ ಹಾಗೆಯೇ ಇದೆ. ಇವತ್ತೂ ಕೂಡ ಅವೆಲ್ಲವೂ ನಿಮಗೆ ಶುಭಾಶಯ ಹೇಳುತ್ತಿವೆ. ಹ್ಯಾಪಿ ಬರ್ತಡೇ ಮೈ ಅಂಬಿ. ಜತೆಗಿರದ ಜೀವ ಎಂದೆಂದಿಗೂ ಜೀವಂತ’ ಎಂದು ಭಾವುಕರಾಗಿ ಶುಭ ಕೋರಿದ್ದಾರೆ.
ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ.
ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು.
ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು.
ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ. ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ… pic.twitter.com/bYNyq4CKKt— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) May 28, 2023
ಈ ನಡುವೆ ಸುಮಲತಾ ತಮ್ಮ ಪ್ರೀತಿಯ ಪತಿ ಅಂಬರೀಶ್ ಮತ್ತು ಪುತ್ರ ಅಭಿಷೇಕ್ ಮಗುವಾಗಿದ್ದಾಗ ತೆಗೆದಿದ್ದ ಸುಂದರ ಫೋಟೋಗಳ ಗ್ಯಾಲರಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿ ಶುಭ ಕೋರಿದ್ದಾರೆ.
ಅಂಬರೀಶ್ ಇಂದು ಬದುಕಿದ್ದರೆ 71 ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಸಿನಿಮಾ ಹೊರತಾಗಿಯೂ ಅವರು ಅಭಿಮಾನಿಗಳ ಹೃದಯಕ್ಕೆ ಹತ್ತಿರವಾಗಿದ್ದವರು. ಅವರನ್ನು ಇಂದು ಅಭಿಮಾನಿಗಳು ಸ್ಮರಿಸಿಕೊಳ್ಳುತ್ತಿದ್ದಾರೆ.
ಪ್ರತಿಭಟನಾನಿರತ ಕುಸ್ತಿಪಟುಗಳ ವಿರುದ್ಧ ಎಫ್‍ಐಆರ್
ಸುಮಲತಾ ಮತ್ತು ಅಂಬರೀಶ್ ಇಬ್ಬರೂ ಪ್ರೀತಿಸಿ ಮದುವೆಯಾದವರು. 1991ರಲ್ಲಿ ಅಂಬರೀಶ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟರು. ಇಬ್ಬರೂ ಸಂತೋಷದ ಜೀವನ ನಡೆಸಿದರು. ಆದರೆ ವಿಧಿಯಾಟ ಬೇರೆಯಾಗಿತ್ತು 2018ರಲ್ಲಿ ಅಂಬರೀಶ್ ಕೊನೆಯುಸಿರೆಳೆದರು. ಅಂಬರೀಶ್ ನಿಧನ ಹೊಂದಿ 4 ವರ್ಷಗಳು ಕಳೆದಿವೆ. ಆದರೆ ಅಭಿಮಾನಿಗಳ ಹೃದಯದಲ್ಲಿ ಇನ್ನೂ ಜೀವಂತವಾಗಿದ್ದಾರೆ. ಅದ್ಭುತ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಅಂಬಿ ಇಲ್ಲ ಎನ್ನುವ ಬೇಸರದ ನಡುವೆಯೂ ಅಭಿಮಾನಿಗಳು ನೆಚ್ಚಿನ ನಟನ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.
Ambareesh, #BirthAnniversary, #SumalathaAmbareesh, #Shares, #Pictures, #Son, #Abishek,