Thursday, December 19, 2024
Homeರಾಷ್ಟ್ರೀಯ | Nationalಅಂಬೇಡ್ಕರ್‌ಗೆ ಅವಮಾನ : ಕಾಂಗ್ರೆಸ್ಸಿಗರ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ಸಂಸದರ ಪ್ರೊಟೆಸ್ಟ್

ಅಂಬೇಡ್ಕರ್‌ಗೆ ಅವಮಾನ : ಕಾಂಗ್ರೆಸ್ಸಿಗರ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ಸಂಸದರ ಪ್ರೊಟೆಸ್ಟ್

Ambedkar remarks: NDA, INDIA bloc MPs hold protest march over Ambedkar issue

ನವದೆಹಲಿ,ಡಿ.19- ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ಕೊಲೆ ಮಾಡಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದು ದೇಶದ ಜನರ ಕ್ಷಮೆ ಕೇಳುವಂತೆ ಆಗ್ರಹಿಸಿ ಸಂಸತ್ ಭವನದ ಎದುರು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮಾಯಿ ಸೇರಿದಂತೆ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಕಾಂಗ್ರೆಸ್ ವಿರುದ್ದ ಪೋಸ್ಟರ್ಗಳನ್ನು ಹಿಡಿದು ಕಾಂಗ್ರೆಸ್ ಸಂವಿಧಾನವನ್ನು ಹತ್ಯೆ ಮಾಡಿದ್ದು, ದೇಶದ ಜನರ ಕ್ಷಮೆ ಕೇಳಬೇಕು ಎಂದು ಘೋಷಣೆ ಕೂಗಿದರು. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವನ್ನು ದೇಶ ಸಹಿಸುವುದಿಲ್ಲ. ಗಾಂಧಿ ಪರಿವಾರ, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಸದರಾದ ಗೋವಿಂದ ಕಾರಜೋಳ, ಅನುರಾಗ್ ಸಿಂಗ್ ಠಾಕೂರ್, ರಾಜ್ಯಸಭಾ ಸದಸ್ಯ ಜಗ್ಗೇಶ್ ಸೇರಿದಂತೆ ಅನೇಕ ಸಂಸದರು ಪಾಲ್ಗೊಂಡಿದ್ದರು.

RELATED ARTICLES

Latest News