ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ

Social Share

ಬೆಂಗಳೂರು, ಡಿ.31- ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮನದ ನಂತರವೂ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗುವ ಲಕ್ಷಣಗಳು ಗೋಚರಿಸಿಲ್ಲ. ಸಂಪುಟ ವಿಸ್ತರಣೆ ಕುರಿತಂತೆ ಅಮಿತ್ ಷಾ ಜೊತೆ ರಾಜ್ಯ ನಾಯಕರು ಚರ್ಚೆ ನಡೆಸಿ ಅನುಮತಿ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈ ಬಗ್ಗೆ ಚರ್ಚೆ ನಡೆಸಲು ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಏಕೆಂದರೆ ಕೋರ್ ಕಮಿಟಿ ಸಭೆ ರದ್ದಾದ ನಂತರ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಾತುಕತೆ ನಡೆಸಿಲ್ಲ ಎಂದು ಮೂಲಗಳು ಖಚಿತಪಡಿಸಿವೆ. ಇದರ ಜೊತೆ ಸಿಎಂ ಜೊತೆಯೂ ಪ್ರತ್ಯೇಕ ಮಾತುಕತೆಯೂ ನಡೆದಿಲ್ಲ. ಇದರಿಂದಾಗಿ ಸಂಪುಟ ವಿಸ್ತರಣೆಗೆ ಮತ್ತೆ ಗ್ರಹಣ ಹಿಡಿದಂತಾಗಿದೆ.

ಕೋರ್ ಕಮಿಟಿ ಸದಸ್ಯರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಲು ಅಮಿತ್ ಶಾ ಉದ್ದೇಶಿಸಿದ್ದರು. ಇದಕ್ಕೆ ಸಿದ್ಧತೆಯೂ ನಡೆದಿತ್ತು. ಆದರೆ ಕೊನೆ ಕ್ಷಣದಲ್ಲಿ ಈ ಸಭೆಯನ್ನು ರದ್ದುಪಡಿಸಲಾಗಿದೆ. ಪ್ರಮುಖರ ಸಭೆ ಈಗ ಬೇಡ ಎಂಬ ಸಂದೇಶವನ್ನು ಮುಖ್ಯಮಂತ್ರಿಗಳ ಕಚೇರಿ ಮತ್ತು ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ತಲುಪಿಸಲಾಯಿತು.

BREAKING : 42 ಐಎಎಸ್ ಅಧಿಕಾರಿಗಳ ವರ್ಗಾವಣೆ

ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಅಮಿತ್ ಶಾ ಇಂದು ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿತ್ತು. ಹೀಗಾಗಿ ಮಾಜಿ ಸಚಿವ ರಮೇಶ್ ಜಜಾರಕಿಹೊಳಿ ಮುಂಜಾನೆಯೇ ಆರ್‍ಟಿ ನಗರದಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿದ್ದರು.

ಸಂಪುಟಕ್ಕೆ ಮರುಸೇರ್ಪಡೆ ವಿಷಯದ ಕುರಿತು ಚರ್ಚಿಸಿ ಅಗತ್ಯತೆಯ ಕುರಿತು ಅಮಿತ್ ಶಾ ಅವರ ಗಮನಕ್ಕೆ ತರಬೇಕು, ಅವೇಶನ ನಡೆಯುವ ವೇಳೆ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದರು.

ಜಾರಕಿಹೊಳಿ ಜೊತೆಗಿನ ಮಾತುಕತೆ ನಡೆಸಿದ ನಂತರ ರೇಸ್‍ಕೋರ್ಸ್ ರಸ್ತೆಯ ಸರ್ಕಾರಿ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದರು.

ರಾಜಾಜಿನಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಮಾರಾಮಾರಿ

ಬಳಿಕ ರೇಸ್‍ಕೋರ್ಸ್ ನಿವಾಸಕ್ಕೆ ಆಗಮಿಸಿ ಅಮಿತ್ ಶಾ ಅವರ ಅನುಮತಿಗಾಗಿ ಕಾಯುತ್ತಿದ್ದರು. ಆದರೆ ಪ್ರಮುಖರ ಸಭೆ ರದ್ದುಪಡಿಸಿದ ಬಳಿಕ ಯಾವುದೇ ಸಂದೇಶ ಅಮಿತ್ ಶಾ ಕಡೆಯಿಂದ ಬಾರದೆ ಇದ್ದುದ್ದರಿಂದ ಆಕಾಂಕ್ಷಿಗಳಲ್ಲಿ ನಿರಾಶೆ ಮೂಡಿದೆ.

Amit Shah, cabinet expansion, CM Bommai,

Articles You Might Like

Share This Article