ಅ.27-28ರಂದು ಅಖಿಲ ಭಾರತ ಗೃಹ ಸಚಿವರ ಸಮ್ಮೇಳನ, ಶಿಕ್ಷೆ ಪ್ರಮಾಣ ಹೆಚ್ಚಿಸುವ ಚರ್ಚೆ

Social Share

ಬೆಂಗಳೂರು,ಅ.25- ಅಖಿಲ ಭಾರತ ಗೃಹ ಸಚಿವರ ಸಮ್ಮೇಳನವು ಹರಿಯಾಣದ ಸೂರಜ್‍ಕುಂಡ್‍ನಲ್ಲಿ ಅ.27-28ರಂದು ನಡೆಯಲಿದ್ದು, ಅಪರಾಧ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿಸುವ ಕುರಿತಂತೆ ಗಂಭೀರ ಚರ್ಚೆ ನಡೆಯಲಿದೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮ್ಮೇಳನದಲ್ಲಿ ರಾಜ್ಯದ ಗೃಹಸಚಿವ ಆರಗ ಜ್ಞಾನೇಂದ್ರ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಎಲ್ಲ ರಾಜ್ಯಗಳ ಪೊಲೀಸ್ ಮುಖ್ಯಸ್ಥರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯದಲ್ಲಿ ಅಪರಾಧಗಳನ್ನು ಪತ್ತೆಹಚ್ಚಲು ಕೈಗೊಂಡಿರುವ ವೈಜ್ಞಾನಿಕ ಕ್ರಮಗಳ ಬಗ್ಗೆ ಸಮ್ಮೇಳನದಲ್ಲಿ ವಿಷಯ ಮಂಡನೆ ಮಾಡಲಾಗುತ್ತದೆ. ಅಪರಾಧ ಪ್ರಕರಣಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಶಿಕ್ಷೆಯಾಗುತ್ತಿಲ್ಲ ಎಂಬ ಅಭಿಪ್ರಾಯವಿದೆ.

ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಪರಾಗಳು ಕಾನೂನಿನ ಕುಣಿಕೆಯಿಂದ ನುಣುಚಿಕೊಳ್ಳದಂತೆ ಕ್ರಮ ಕೈಗೊಳ್ಳುವುದು ಸೇರಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ವಿಶೇಷ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು.

ಬಿಜೆಪಿ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳೋದಕ್ಕೆ ಮಾತ್ರ ಸೀಮಿತವೇ..?

ಅಪರಾಧ ಪ್ರಕರಣ ಜರುಗಿದಾಗ ವಿಶೇಷ ತರಬೇತಿ ಹೊಂದಿದ ಅಕಾರಿ ಸ್ಥಳ ವೀಕ್ಷಣೆ ಮಾಡಿ ವೈಜ್ಞಾನಿಕ ರೀತಿಯಲ್ಲಿ ಸಾಕ್ಷ್ಯ ಸಂಗ್ರಹ ಮಾಡಲಿದ್ದಾರೆ. ಅಲ್ಲದೆ ಸೈಬರ್ ಅಪರಾಧಗಳನ್ನು ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಸಮ್ಮೇಳನದಲ್ಲಿ ಹಂಚಿಕೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Articles You Might Like

Share This Article