ವಿಧಿ ವಿಜ್ಞಾನ ವಿವಿಗೆ ನಾಳೆ ಶಂಕುಸ್ಥಾಪನೆ

Social Share

ಬೆಂಗಳೂರು,ಜ.27- ರಾಜ್ಯದಲ್ಲಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವ ಪ್ರಮಾಣ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ವಿಧಿವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆಗೆ ನಾಳೆ ಶಂಕುಸ್ಥಾಪನೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ನಾಳೆ ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ ಆವರಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ವಿಧಿ ವಿಜ್ಞಾನ ವಿಶ್ವ ವಿದ್ಯಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದು, ಅಪರಾಧ ಪತ್ತೆ ಪ್ರಕರಣದ ತನಿಖೆಗೆ ಸಹಾಯಕವಾಗುವ ನಿಟ್ಟಿನಲ್ಲಿ ಇದು ಪ್ರಮುಖ ಮೈಲಿಗಲ್ಲು ಆಗಲಿದೆ ಎಂದು ತಿಳಿಸಿದ್ದಾರೆ.

ಅಪರಾಧ ಪತ್ತೆ ಪ್ರಕ್ರಿಯೆಯಲ್ಲಿ ವಿವಿ ಗಣನೀಯ ಸೇವೆ ಸಲ್ಲಿಸಲಿದೆ. ಆಧುನಿಕ ತಂತ್ರಜ್ಞಾನದ ಬಳಕೆ ಅತ್ಯಂತ ಪರಿಣಾಮಕಾರಿ ಫಲಿತಾಂಶ ನೀಡಲಿದ್ದು, ನ್ಯಾಯಾಲಯಗಳೂ ಈ ಸಂಬಂಧ ಉತ್ತೇಜನ ನೀಡುತ್ತಿವೆ. ರಾಜ್ಯ ಸರ್ಕಾರ, ಈ ಸಂಬಂಧ ತರಬೇತಿ ಪಡೆದ ಮಾನವ ಸಂಪನ್ಮೂಲ ನಿರ್ಮಾಣಕ್ಕೆ ಆದ್ಯತೆ ನೀಡಿದೆ ಎಂದಿದ್ದಾರೆ.

ಏರ್ ಷೋ ಸಂದರ್ಭದಲ್ಲಿ ಮಾನ ಹರಾಜಾಗದಂತೆ ನೋಡಿಕೊಳ್ಳಲು ಬಿಬಿಎಂಪಿ ಸಿದ್ಧತೆ

ರಾಜ್ಯದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇತ್ತೀಚೆಗೆ ಅಹಮದಾಬಾದ್ ನಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಕೇಂದ್ರಕ್ಕೆ ರಾಜ್ಯದ ಹಿರಿಯ ಅಧಿಕಾರಿ ಗಳೊಂದಿಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು.

ರಾಜ್ಯದಲ್ಲಿ ಉದ್ದೇಶಿತ ವಿಧಿವಿಜ್ಞಾನ ವಿಶ್ವ ವಿದ್ಯಾಲಯ ಸಂಪೂರ್ಣವಾಗಿ ಕೇಂದ್ರದ ಅನುದಾನದ ನೆರವಿನೊಂದಿಗೆ ಸ್ಥಾಪನೆಗೊಳ್ಳುತ್ತಿದೆ.

Home Minister, Amit Shah, foundation, stone, forensic university, Dharwad, aragajnanendra,

Articles You Might Like

Share This Article