ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಷಾ ಹಿತ ಬೋಧನೆ..!

Social Share

ಬೆಂಗಳೂರು,ಆ.4- ರಾಜ್ಯದಲ್ಲಿ ಪ್ರಸಕ್ತ ಉಂಟಾಗಿರುವ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿಭಾಯಿಸಿ ಪ್ರತಿಪಕ್ಷಗಳ ಕೈಗೆ ಅಸ್ತ್ರವಾಗದಂತೆ ಎಚ್ಚರಿಕೆ ಹೆಜ್ಜೆ ಇಡಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಬಿಜೆಪಿ ನಾಯಕರಿಗೆ ಸಲಹೆ ಮಾಡಿದ್ದಾರೆ.

ಅಕೃತ ಕಾರ್ಯಕ್ರದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿರುವ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಸಚಿವರಾದ ಆರಗ ಜ್ಞಾನೇಂದ್ರ, ಮುರುಗೇಶ್ ನಿರಾಣಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಚಿವ ಎಸ್.ಎ.ರಾಮದಾಸ್ ಸೇರಿದಂತೆ ಮತ್ತಿತರರು ಪ್ರಮುಖರು ಭೇಟಿಯಾಗಿ ಮಾತುಕತೆ ನಡೆಸಿದ ವೇಳೆ ಸೂಕ್ಷ್ಮ ವಿಚಾರಗಳನ್ನು ತಾಳ್ಮೆಯಿಂದ ಪರಿಹರಿಸಿ ಜನರ ವಿಶ್ವಾಸಗಳಿಸಬೇಕೆಂದು ಕಿವಿಮಾತು ಹೇಳಿದ್ದಾರೆ.

ಕಳೆದ 15 ದಿನಗಳ ಅವಯಲ್ಲಿ ಮಂಗಳೂರಿನಲ್ಲಿಯೇ ಮೂವರು ಯುವಕರ ಬರ್ಬರ ಕೊಲೆ, ಕಾನೂನು ಸುವ್ಯವಸ್ಥೆ, ಪಕ್ಷದ ಯುವ ಕಾರ್ಯಕರ್ತರೇ ರಾಜೀನಾಮೆ ನೀಡುತ್ತಿರುವುದೂ ಸೇರಿದಂತೆ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಅಮಿತ್ ಶಾ ರಾಜ್ಯ ನಾಯಕರಿಂದ ಮಾಹಿತಿ ಪಡೆದರು.

ಪ್ರತಿಪಕ್ಷಗಳು ಏನೇ ಆರೋಪಿಸಿದರೂ ಅದರ ಬಗ್ಗೆ ಹೆಚ್ಚು ಗಮನ ಕೊಡಬೇಡಿ. ಮೊದಲು ಪರಿಸ್ಥಿತಿಯನ್ನು ನಿಭಾಯಿಸಬೇಕು. ಗುಪ್ತಚರ, ಆಂತರಿಕ ಭದ್ರತೆಯನ್ನು ಬಲಪಡಿಸಿ ಸಮಾಜಘಾತುಕ ಶಕ್ತಿಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸೂಚನೆ ಕೊಟ್ಟಿದ್ದಾರೆ.

ಕಾನೂನು ಸುವ್ಯವಸ್ಥೆ ಕುರಿತಂತೆ ಕೇಂದ್ರದಿಂದ ನಿಮಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು. ಕಾನೂನು ಸುವ್ಯವಸ್ಥೆ ಹಾಳಾದರೆ ಸರ್ಕಾರದ ಮೇಲೆ ಸಾರ್ವಜನಿಕರು ಆಕ್ರೋಶಗೊಳ್ಳುತ್ತಾರೆ. ಪರಿಸ್ಥಿತಿ ಕೈ ತಪ್ಪುವ ಮೊದಲೇ ಎಚ್ಚೆತ್ತುಕೊಂಡು ಪರಿಸ್ಥಿತಿಯನ್ನು ನಿಯಂತ್ರಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಅಮಿತ್ ಶಾ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆಯಾದಾಗ ತಕ್ಷಣವೇ ಆರೋಪಿಗಳನ್ನು ಪತ್ತೆ ಮಾಡಿದ್ದರೆ ಇಂತಹ ಪರಿಸ್ಥಿತಿ ಉದ್ಭವವಾಗುತ್ತಿರಲಿಲ್ಲ. ಯುವಕನಿಗೆ ಪ್ರಾಣ ಬೆದರಿಕೆ ಇದೆ ಎಂಬುದು ಗೊತ್ತಾದಾಗ ಎಚ್ಚರ ವಹಿಸುವಂತೆ ಸೂಚಿಸಬೇಕಿತ್ತು. ಪರಿಸ್ಥಿತಿ ಇಲ್ಲಿಯ ತನಕ ಬೆಳೆಯಲು ಬಿಟ್ಟಿದ್ದು ನಿಮ್ಮ ತಪ್ಪು ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಕರಾವಳಿ ಹಾಗೂ ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಭಾಗಗಳಲ್ಲಿ ಸಿಸಿ ಟಿವಿ ಅಳವಡಿಕೆ, ಚೆಕ್‍ಪೆÇೀಸ್ಟ್‍ಗಳ ಹೆಚ್ಚಳ, ಸಮಾಜಘಾತುಕ ಶಕ್ತಿಗಳ ಮೇಲೆ ಹದ್ದಿನ ಕಣ್ಣಿಡುವುದು ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸರ್ಕಾರಕ್ಕೆ ಈ ರೀತಿ ಮುಜುಗರ ಸೃಷ್ಟಿಸುವ ಸನ್ನಿವೇಶಗಳ ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

ಮಂಗಳೂರಿಗೆ ಅಗತ್ಯವಾದರೆ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಕೇಂದ್ರವನ್ನು ಸ್ಥಾಪನೆ ಮಾಡಲಾಗುವುದು. ರಾಜ್ಯದ ಜನತೆಯ ಒತ್ತಾಸೆಯಂತೆ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಗಳ ನಿಷೇಧ ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ.

ಮೊದಲು ಪರಿಸ್ಥಿತಿಯನ್ನು ಸಹಬದಿಗೆ ತರಬೇಕೆಂದು ಕಟ್ಟುನಿಟ್ಟಿನ ಸೂಚನೆಯನ್ನು ಅಮಿತ್ ಶಾ ನೀಡಿದ್ದಾರೆ.
ಇತ್ತೀಚೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪಕ್ಷಕ್ಕೆ ಸಾಕಷ್ಟು ಮುಜುಗರ ತಂದಿವೆ. ಹೀಗಾಗಿ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಕಾನೂನು ಸುವ್ಯವಸ್ಥೆ ಸೇರಿದಂತೆ ಹಲವು ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಅಮಿತ್ ಶಾ ಖಡಕ್ ಸೂಚನೆ ಕೊಟ್ಟಿದ್ದಾರೆ.

Articles You Might Like

Share This Article