ನಾಳೆ ತ್ರಿಪುರದಲ್ಲಿ ಅಮಿತ್ ಶಾ ಚುನಾವಣಾ ರ‍್ಯಾಲಿ

Social Share

ಅಗರ್ತಲ, ಫೆ.5 – ತ್ರಿಪುರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಫೆ.6 ರಂದು ನಡೆಯಲಿರುವ ಎರಡು ರ‍್ಯಾಲಿಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ.

ಭಾನುವಾರ ರಾತ್ರಿ 11:30 ರ ವೇಳೆಗೆ ಎಮ್‍ಬಿಬಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅಮಿತ್ ಶಾ ಸೋಮವಾರ ಖೋವಾಯಿ ಜಿಲ್ಲೆ ಮತ್ತು ದಕ್ಷಿಣ ತ್ರಿಪುರ ಜಿಲ್ಲೆಯ ಸಂತಿರ್‍ಬಜಾರ್‍ನಡೆಯಲಿರುವ ಪ್ರತ್ಯೇಕ ಚುನಾವಣಾ ರ್ಯಾಲಿಗಳಲ್ಲಿ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಲಿದ್ದಾರೆ. ಇದರೊಂದಿಗೆ ಅಗರ್ತಲದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಮಾಘ ಹುಣ್ಣಿಮೆಯಂದು ಗಂಗಾ ಸ್ನಾನ ಮಾಡಿ ಪುನಿತರಾದ ಭಕ್ತ ಸಾಗರ

ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಶಾ ಮತ್ತು ಯುವ ಮೋರ್ಚಾ ರಾಜ್ಯಾಧ್ಯಕ್ಷ ನಬದಲ್ ಬನಿಕ್ ರ‍್ಯಾಲಿ ನಡೆಯಲಿರುವ ಸ್ಥಳಕ್ಕೆ ಪೂರ್ವಭಾವಿಯಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಜಧಾನಿಯಾದ್ಯಂತ ಬಿಗಿ ಭದ್ರತೆ ಆಯೋಜಿಸಲಾಗಿದೆ.

ಪೆ.7 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತ್ರಿಪುರದಲ್ಲಿನ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

Amit Shah, address, two election, rallies, Tripura, Monday,

Articles You Might Like

Share This Article