ಕರಾವಳಿಯಲ್ಲಿ ಅಮಿತ್ ಷಾ ರಣಕಹಳೆ

Social Share

ಮಂಗಳೂರು,ಫೆ.11- ಮುಂಬರುವ ವಿಧಾನಸಭೆ ಚುನಾವಣೆ ಪಕ್ಷದ ಭದ್ರಕೋಟೆ ಎನಿಸಿದ ಕರಾವಳಿಯ ಹೆಬ್ಬಾಗಿಲು ಮಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಆರು ಜಿಲ್ಲೆಗಳ ಕೋರ್‍ಕಮಿಟಿ ಸಭೆ ನಡೆಸಿ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿದರು.

ಕೇರಳದ ಕಣ್ಣೂರಿನಿಂದ ಆಗಮಿಸಿದ ಅಮಿತ್ ಷಾ ಅವರು ಮಧ್ಯಾಹ್ನ ಪಕ್ಷದ ವಿವಿಧ ಮುಖಂಡರು ಹಾಗೂ ಮೋರ್ಚಾಗಳ ಮುಖ್ಯಸ್ಥರ ಜೊತೆ ಸರಣಿ ಸಭೆ ನಡೆಸಿದ ಅವರು, ಕರಾವಳಿಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗದಂತೆ ಭಿನ್ನಮತ ಮರೆತು ಒಗ್ಗಟ್ಟಿನಿಂದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಂಗಳೂರು, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಮಡಿಕೇರಿ ಜಿಲ್ಲೆಗಳ ಸಂಘಟನೆಯ ಮುಖ್ಯಸ್ಥರು, ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಜೊತೆ ಸುದೀರ್ಘ ಸಭೆ ನಡೆಸಿದ ಅಮಿತ್ ಷಾ ಅವರು ಈ ಜಿಲ್ಲೆಗಳಲ್ಲಿ ಯಾವುದೇ ಕಾರಣಕ್ಕೂ ಪಕ್ಷಕ್ಕೆ ಹಿನ್ನಡೆಯಾಗಬಾರದೆಂದು ತಾಕೀತು ಮಾಡಿದರು.

ಇತ್ತೀಚಿನ ಕೆಲವು ಕಹಿ ಘಟನೆಗಳಿಂದಾಗಿ ಕರಾವಳಿಯಲ್ಲಿ ಬಿಜೆಪಿಗೆ ಕಳೆದ ಬಾರಿಯ ಫಲಿತಾಂಶಕ್ಕಿಂತ ತುಸು ಹಿನ್ನಡೆಯಾಗಲಿದೆ ಎಂದು ಆಂತರಿಕ ಸಮೀಕ್ಷೆಗಳು ಹೇಳಿದ್ದವು. ಹೀಗಾಗಿ ಎಚ್ಚೆತ್ತುಕೊಂಡಿರುವ ಪಕ್ಷದ ವರಿಷ್ಠರು ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳನ್ನು ಕೈಗೊಂಡಿದ್ದಾರೆ.

ರಾಜ್ಯದಲ್ಲಿ ಕೇಂದ್ರ ಗೃಹ ಸಚಿವರಿಗೇ ಇಲ್ಲ ರಕ್ಷಣೆ : ಡಿಕೆಶಿ ಟೀಕೆ

ಇತ್ತೀಚಿಗಷ್ಟೇ ಪ್ರಧಾನ ಮಂತ್ರಿ ನರೇಂದ್ರಮೋದಿ ಕಲಬುರಗಿಗೆ ಭೇಟಿ ನೀಡಿದ್ದರು, ಇದರ ಬೆನ್ನಲ್ಲೇ ಕೇಂದ್ರ ಸಚಿವ ಅಮಿತ್ ಶಾ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ಕೊಟ್ಟರು. ಬಳಿಕ ಪುತ್ತೂರಿಗೆ ಭೇಟಿ ಕೊಟ್ಟಅಮಿತ್ ಶಾ ಕೇಂದ್ರ ಅಡಿಕೆ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ರೊ)ನ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇಂದು ಮಧ್ಯಾಹ್ನ 2.15 ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಮಧ್ಯಾಹ್ನ 2.45 ಕಣ್ಣೂರಿನಿಂದ ಬಿಎಸ್‍ಎಫ್ ಹೆಲಿಕಾಪ್ಟರ್ ಮೂಲಕ ಪುತ್ತೂರಿನ ಈಶ್ವರ ಮಂಗಲ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಬಳಿಕ 3.35 ಹೆಲಿಕಾಪ್ಟರ್ ಮೂಲಕ ಈಶ್ವರ ಮಂಗಲದಿಂದ ಪುತ್ತೂರಿಗೆ ತೆರೆಳಿದ ಅವರು, ಮಧ್ಯಾಹ್ನ 3.40ಕ್ಕೆ ಪ್ರತಿಷ್ಠಿತ ಕ್ಯಾಂಪ್ರೊ ಸಂಸ್ಥೆಯ ಸುವರ್ಣ ಮಹೋತ್ಸವದ ಸಮಾರಂಭದಲ್ಲಿ ಪಾಲ್ಗೊಂಡರು.

ಬಳಿಕ ಸಂಜೆ 6.15ರಿಂದ 8 ಗಂಟೆವರೆಗೆ ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖ ನಾಯಕರೊಂದಿಗೆ ಆಂತರಿಕ ಸಭೆ ನಡೆಸಿ ನಡೆಸಿ ರಾತ್ರಿ 8.15ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮತ್ತೆ ದೆಹಲಿಗೆ ವಾಪಸ್ ಆಗಲಿದ್ದಾರೆ.

ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ಸಿದ್ಧತೆ ಕೈಗೊಳ್ಳಲಾಗಿತ್ತು. ಪುತ್ತೂರು ವಲಯ ವ್ಯಾಪ್ತಿಯಲ್ಲಿ ಶನಿವಾರ ಮದ್ಯದ ಅಂಗಡಿಗಳಿಗೆ ಹಾಗೂ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಕಾರಿ ಎಂ.ಆರ್.ರವಿಕುಮಾರ್ ಆದೇಶ ಹೊರಡಿಸಿದ್ದರು.

1700 ಅಡಿ ಎತ್ತರದ ಗಡಾಯಿಕಲ್ಲು ಏರಲಿರುವ ಜ್ಯೋತಿರಾಜ್

ಆದೇಶದ ಪ್ರಕಾರ ಇಂದು ಮಧ್ಯಾಹ್ನ 12ರಿಂದ ರಾತ್ರಿ 8ರವರೆಗೆ ಮದ್ಯ ಮಾರಾಟ ನಿಷೇಸಲಾಗಿತ್ತು. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಕಾರಿ ಈ ಆದೇಶ ಹೊರಡಿಸಿದ್ದರು.

Amit Shah, attend, meeting, BJP leaders, Mangaluru,

Articles You Might Like

Share This Article