ನಾಳೆ ಗಣಿ ಜಿಲ್ಲೆ ಬಳ್ಳಾರಿಗೆ ಅಮಿತ್ ಷಾ

Social Share

ಬೆಂಗಳೂರು,ಫೆ.22- ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚಾಗುತ್ತಿದ್ದು, ಬಿಜೆಪಿ ಹೈಕಮಾಂಡ್ ನಾಯಕರ ರಾಜ್ಯ ಪ್ರವಾಸ ಮುಂದುವರೆದಿದೆ. ನಾಳೆ ಗಣಿ ಜಿಲ್ಲೆಯ ಬಿಜೆಪಿ ನಾಯಕರಿಗೆ ಎಲೆಕ್ಷನ್ ಬೂಸ್ಟರ್ ಡೋಸ್ ನೀಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದು, ರಾಜ್ಯ ಬಿಜೆಪಿ ನಾಯಕರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಿ.ಪಿ.ನಡ್ಡಾ ರಾಜ್ಯದಲ್ಲಿ ಮೂರು ದಿನಗಳ ಪ್ರವಾಸದ ಬೆನ್ನಲ್ಲೇ, ಅಮಿತ್ ಶಾ ನಾಳೆ ಬಳ್ಳಾರಿಗೆ ಆಗಮಿಸುತ್ತಿದ್ದು, ಚುನಾವಣಾ ತಂತ್ರಗಾರಿಕೆಯ ಕುರಿತು ಸಾಕಷ್ಟು ವಿಚಾರಗಳನ್ನು ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸಲಿದ್ದಾರೆ.

ನಾಳೆ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಸಾರ್ವಜನಿಕ ಸಮಾವೇಶಕ್ಕಾಗಿ ಅವರು ಭಾಗವಹಿಸುತ್ತಿದ್ದು,
ಸಮಾವೇಶಕ್ಕೆ ಈಗಾಗಲೇ ವೇದಿಕೆ ಸಜ್ಜಾಗಿದೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರೀ ಶತಾಯ ಗತಾಯ ಗೆಲುವು ಸಾಧಿಸಲೆಬೇಕು ಎಂದು ಪಣ ತೊಟ್ಟಿರುವ ಬಿಜೆಪಿ, ಹೈಕಮಾಂಡ್ ನಾಯಕರು ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಮೂಲಕ ವಿಜಯ ಕಹಳೆಗೆ ತಯಾರಿ ನಡೆಸಿದೆ.

IAS- IPS ಬೀದಿ ಜಗಳಕ್ಕೆ ಮತ್ತೊಂದು ಟ್ವಿಸ್ಟ್

ಇನ್ನೂ ಈ ಸಾರ್ವಜನಿಕ ಸಮಾವೇಶದಲ್ಲಿ ಬಳ್ಳಾರಿ ಜಿಲ್ಲೆಯನ್ನು ಒಳಗೊಂಡಂತೆ ಕಲ್ಯಾಣ ಕರ್ನಾಟಕ ಭಾಗದಿಂದ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ದೆಹಲಿ ನಿವಾಸದಿಂದ ರಸ್ತೆ ಮೂಲಕ ಏರ್‍ಫೋರ್ಟ್‍ಗೆ ಪ್ರಯಾಣಿಸಲಿರುವ ಕೇಂದ್ರ ಗೃಹಸಚಿವರು, ಅಮಿತ್ ಶಾ 10:15ಕ್ಕೆ ವಾಯುಪಡೆ ವಿಶೇಷ ವಿಮಾನದ ಮೂಲಕ ರಾಜ್ಯಕ್ಕೆ ಆಗಮಿಸಲಿದ್ದಾರೆ. 12:50ಕ್ಕೆ ಹುಬ್ಬಳ್ಳಿ ಏರ್‍ಪೆಫೋರ್ಟ್ ತಲುಪಲಿದ್ದಾರೆ. 12:55ಕ್ಕೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಸಂಡೂರಿಗೆ ಪ್ರಯಾಣಿಸಲಿದ್ದಾರೆ.

ಮಧ್ಯಾಹ್ನ 1:25ಕ್ಕೆ ಸಂಡೂರು ಹೆಲಿಪ್ಯಾಡ್ ತಲುಪಲಿದ್ದು 1:30ಕ್ಕೆ ಹೆಲಿಪ್ಯಾಡ್‍ನಿಂದ ರಸ್ತೆ ಮೂಲಕ ಸಾರ್ವಜನಿಕ ಸಮಾವೇಶದ ಸ್ಥಳಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 1:30ರಿಂದ 2:30ರವರೆಗೆ ಬಿಜೆಪಿ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇನ್ನೂ ಸಾರ್ವಜನಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಶ್ರೀರಾಮುಲು ಸೇರಿದಂತೆ ಹಲವು ಸಚಿವರು, ಶಾಸಕರು ಹಾಗೂ ಸ್ಥಳೀಯ ನಾಯಕರು ಭಾಗವಹಿಸಲಿದ್ದಾರೆ.

ಸಾವರ್ಜನಿಕ ಸಮಾವೇಶ ಮುಗಿದ ಬಳಿಕ ಶಿವಪುರ ಪ್ಯಾಲೇಸ್‍ನಲ್ಲಿ ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಕೋರ್ ಕಮಿಟಿ ಸಭೆ ನಡೆಯಲಿದ್ದು, ಚುನಾವಣಾ ತಂತ್ರಗಾರಿಕೆ, ಸರ್ಕಾರ ಕಾರ್ಯಕ್ರಮಗಳ ಬಗ್ಗೆ ಜಾಗೃತಿ, ಟಿಕೆಟ್ ವಿಚಾರದಲ್ಲಿನ ಗೊಂದಲ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಉದ್ಧವ್ ಕಾಲೆಳೆದ ಸಚಿವ ಅನುರಾಗ್ ಠಾಕೂರ್

ರಾಜ್ಯ ನಾಯಕರ ಜೊತೆ ಸಭೆ:
ಮಧ್ಯಾಹ್ನ 3 ಗಂಟೆಗೆ ಬಳ್ಳಾರಿ, ಕೊಪ್ಪಳ, ವಿಜಯನಗರ, ರಾಯಚೂರು ಜಿಲ್ಲೆಗಳ ನಾಯಕರ ಜೊತೆಗೆ ಸಭೆ ನಡೆಸಲಿದ್ದಾರೆ. ಸುಮಾರು 1 ಗಂಟೆ ಬಿಜೆಪಿ ನಾಯಕರ ಜತೆಗೆ ಅಮಿತ್ ಶಾ ಹೈವೋಲ್ಟೇಜ್ ಸಭೆ ನಡೆಸಲಿದ್ದು, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ. 4 ಜಿಲ್ಲೆಯ ಜಿಲ್ಲಾಧ್ಯಕ್ಷರು, ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇಂದು ಬಿಜೆಪಿ ಸೇರಲಿದ್ದಾರೆ ಹಿರಿಯ ನಟ ಅನಂತನಾಗ್

ಸಂಜೆ 4 ಗಂಟೆಗೆ ಸಭೆ ಮುಗಿಸಿ ಸಂಡೂರು ಹೆಲಿಪ್ಯಾಡ್??ಗೆ ರಸ್ತೆ ಮೂಲಕ ಪ್ರಯಾಣಿಸಲಿರುವ ಅಮಿತ್ ಶಾ, ಸಂಡೂರು ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಸಂಜೆ 4:40 ಕ್ಕೆ ಜಕ್ಕೂರು ಹೆಲಿಪ್ಯಾಡ್ ತಲುಪಲಿರುವ ಅವರು 4:45ಕ್ಕೆ ಜಕ್ಕೂರು ಹೆಲಿಪ್ಯಾಡ್ ನಿಂದ ತಾಜ್ ವೆಸ್ಟೆಂಡ್ ಹೋಟೆಲ್‍ಗೆ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆ. 5:10ಕ್ಕೆ ತಾಜ್ ವೆಸ್ಟೆಂಡ್ ಹೋಟೆಲ್ ತಲುಪಲಿರುವ ಅವರು, ಸಂಜೆ 6 ಗಂಟೆಗೆ ಬಿಜೆಪಿ ಪ್ರಮುಖರ ಜೊತೆಗೆ ಸಂವಾದ ನಡೆಸಲಿದ್ದಾರೆ.

ಮಿಷನ್ 150 ಟಾರ್ಗೆಟ್ ಕುರಿತ ಸಮಾಲೋಚನೆ:
ಸಂಜೆ 7:10ರಿಂದ 8 ಗಂಟೆಯವರೆಗೆ ವಿಶೇಷ ಭೋಜನಕೂಟದಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ 8 ಗಂಟೆಗೆ ರಾಜ್ಯ ಬಿಜೆಪಿ ನಾಯಕರ ಜೊತೆಗೆ ಹೈವೋಲ್ಟೇಜ್ ಮೀಟಿಂಗ್ ನಡೆಸಲಿದ್ದಾರೆ. ಚುನಾವಣೆಯ ತಯಾರಿ ಬಗ್ಗೆ ಚರ್ಚೆ ನಡೆಸಲಿದ್ದು, ಮಿಷನ್ 150 ಟಾರ್ಗೆಟ್ ಕುರಿತು ಅವರು ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Amit Shah, visit, Bellary, February 23,

Articles You Might Like

Share This Article