ನವದೆಹಲಿ, ಅ.1- ಕೇಂದ್ರ ಗೃಹ ಸಚಿವ ಅಮಿತ್ ಶಾ ಅಕ್ಟೋಬರ್ 4 ರಿಂದ ಎರಡು ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಅಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ. ಭೇಟಿಯ ಮೊದಲ ದಿನ, ಷಾ ರಜೌರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ, ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಬೆಳಿಗ್ಗೆ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಜಮ್ಮುವಿನ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಅಕ್ಟೋಬರ್ 5 ರಂದು ಶ್ರೀನಗರದ ರಾಜಭವನದಲ್ಲಿ ನಡೆಯಲಿರುವ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸೇನೆಯ ಉನ್ನತ ಅಕಾರಿಗಳು, ಅರೆಸೇನಾ ಪಡೆಗಳು, ರಾಜ್ಯ ಪೊಲೀಸ್ ಮತ್ತು ನಾಗರಿಕ ಆಡಳಿತ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಶ್ರೀನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ಮಾಡುವ ಮೊದಲು ಷಾ ಬಾರಾಮುಲ್ಲಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.