ಕರ್ನಾಟಕದ ಮೇಲೆ ಬಿಜೆಪಿ ಚಾಣಕ್ಯನ ಕಣ್ಣು

Social Share

ಬೆಳಗಾವಿ,ಡಿ.28- ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಪೂರಕವಾಗಿ ಮಂಡ್ಯದಲ್ಲಿ ನಡೆಯುತ್ತಿರುವ ಸಾರ್ವಜನಿಕ ಸಭೆ ಮತ್ತು ಬೆಂಗಳೂರಿನಲ್ಲಿ ಬೂತ್ ಅಧ್ಯಕ್ಷರ ಸಮಾವೇಶ ನಡೆಯುತ್ತಿದ್ದು, ಪಕ್ಷದ ನಾಯಕರ ಜೊತೆಯೂ ಸಭೆ ನಡೆಸಲು ಅಮಿತ್ ಷಾ ಸಮಯ ನಿಗದಿಪಡಿಸಿದ್ದಾರೆ.

ಡಿ.29ರಂದು ರಾತ್ರಿ 10.5ಕ್ಕೆ ಯಲಹಂಕ ವಾಯುನೆಲೆಗೆ ಆಗಮಿಸಲಿರುವ ಅಮಿತ್ ಶಾ ರಾತ್ರಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಡಿ.30ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12.15 ರವರೆಗೆ ಸಮಯವನ್ನು ಕಾಯ್ದಿರಿಸಲಾಗಿದೆ. ಮಧ್ಯಾಹ್ನ 1.10ಕ್ಕೆ ಯಲಹಂಕ ವಾಯುನೆಲೆಯಿಂದ ಭಾರತೀಯ ವಾಯುಪಡೆ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ಪ್ರಯಾಣಿಸಲಿದ್ದಾರೆ. 1.45 ರಿಂದ 3.15 ರವರೆಗೆ ಮಂಡ್ಯದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಕೋಟಿ ಕೋಟಿ ಲೂಟಿ ಹೊಡೆದ ಭ್ರಷ್ಟ ಬಿಬಿಎಂಪಿ ಅಧಿಕಾರಿಗಳಿಗೆ ಇಡಿ ಚಾಟಿ

ಸಂಜೆ 5.20ಕ್ಕೆ ಯಲಹಂಕ ವಾಯುನೆಲೆಗೆ ಅಮಿತ್ ಶಾ ವಾಪಸಾಗಲಿದ್ದು, 5.40ಕ್ಕೆ ಅರಮನೆ ಮೈದಾನಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 6.45 ರವರೆಗೆ ಸಹಕಾರಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಅಂದು ರಾತ್ರಿ 8 ರಿಂದ 9.30ರವರೆಗೆ ಪಕ್ಷದ ಮುಖಂಡರ ಜೊತೆ ಸಭೆ ನಡೆಸಲು ಸಮಯ ಕಾಯ್ದಿರಿಸಿದ್ದಾರೆ.

ಈ ವೇಳೆ ಪಕ್ಷ ಸಂಘಟನೆ, ಪಕ್ಷಕ್ಕೆ ಎದುರಾಗಿರುವ ಸವಾಲುಗಳು ಸೇರಿದಂತೆ ಸಂಘಟನಾತ್ಮಕ ವಿಚಾರಗಳ ಕುರಿತು ರಾಜ್ಯ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ. ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತ್ಯೇಕ ಮಾತುಕತೆ ನಡೆಸಿ ಸಚಿವ ಸಂಪುಟ ವಿಸ್ತರಣೆ ವಿಚಾರದ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.

ನಾಯಕರ ಜೊತೆಗಿನ ಸಭೆ ಬಳಿಕ ಅಮಿತ್ ಷಾ ರಾತ್ರಿ ತಾಜ್ ವೆಸ್ಟ್ ಎಂಡ್ ಹೋಟೆಲ್‍ನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಡಿ.31ರಂದು ಬೆಳಗ್ಗೆ 8.30 ರಿಂದ 9.30ರವರೆಗೆ ಪಕ್ಷದ ಮುಖಂಡರ ಜೊತೆ ಉಪಹಾರ ಕೂಟ ನಡೆಸಲಿದ್ದಾರೆ.

ಈ ವೇಳೆಯೂ ರಾಜಕೀಯ ವಿಚಾರಗಳ ಕುರಿತು ನಾಯಕರ ಜೊತೆ ಸಮಾಲೋಚನೆ ನಡೆಸಿ ಸದ್ಯದ ಪರಿಸ್ಥಿತಿಯ ಅವಲೋಕನ ಮಾಡಲಿದ್ದಾರೆ. ನಂತರ ದೇವನಹಳ್ಳಿ ತಾಲ್ಲೂಕಿನ ಅವತಿ ಗ್ರಾಮಕ್ಕೆ ತೆರಳಲಿದ್ದು, 11ರಿಂದ 12.30 ರವರೆಗೆ ನಡೆಯಲಿರುವ ಭೂಮಿ ಪೂಜೆ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.

ಮನೆಗೆ ಬೆಂಕಿ ಬಿದ್ದು ಒಂದೇ ಕುಟುಂಬದ ಐವರು ಸಜೀವ ದಹನ

ಮಧ್ಯಾಹ್ನ 1ರಿಂದ 2.30ರವರೆಗೆ ಮಲ್ಲೇಶ್ವರಂನ ಸೌಹಾರ್ಧ ಸಹಕಾರಿ ಫೆಡರೇಷನ್‍ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಯಿಂದ 4.30ರವರೆಗೆ ಬೂತ್ ಅಧ್ಯಕ್ಷರು ಮತ್ತು ಬೂತ್ ಮಟ್ಟದ ಏಜೆಂಟ್‍ಗಳ ಸಭೆಯನ್ನು ಅರಮನೆ ಮೈದಾನದಲ್ಲಿ ನಡೆಸಲಿದ್ದಾರೆ. ಸಂಜೆ 5.05 ಗಂಟೆಗೆ ಯಲಹಂಕ ವಾಯುನೆಲೆಯಿಂದ ದೆಹಲಿಗೆ ತೆರಳುವರು.

ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಅಮಿತ್ ಶಾ ಅವರ ಈ ಭೇಟಿಯು ಪಕ್ಷದ ಗೆಲುವಿನ ಓಟಕ್ಕೆ ಮತ್ತಷ್ಟು ಶಕ್ತಿ ತುಂಬಲಿದೆ. ಮೈಸೂರು ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಅವರ ಭೇಟಿ ಅತ್ಯಂತ ಮಹತ್ವದ್ದಾಗಲಿದೆ ಎಂದು ತಿಳಿಸಿದ್ದಾರೆ.

Amit Shah, visit, poll-bound, Karnataka, Dec 30,

Articles You Might Like

Share This Article