ಫೆ.11 ರಂದು ಅಮಿತ್ ಷಾ ಮತ್ತೆ ಕರ್ನಾಟಕ ಭೇಟಿ

Social Share

ಬೆಂಗಳೂರು,ಫೆ.9- ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ಪರಮೋಚ್ಚ ನಾಯಕರಾದ ಪ್ರಧಾನಿ ನರೇಂದ್ರಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯಕ್ಕೆ ಪದೇ ಪದೆ ಕರೆಸಿಕೊಳ್ಳುತ್ತಿದೆ. ಅಮಿತ್ ಷಾ ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ರಾಜ್ಯಕ್ಕೆ ಭೇಟಿ ನೀಡಿ 15 ದಿನ ಕಳೆಯುತ್ತಿದ್ದಂತೆ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುತ್ತಿರುವ ಅಮಿತ್ ಷಾ ಫೆ.11ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಪುತ್ತೂರಿನಲ್ಲಿ ನಡೆಯಲಿರುವ ಕ್ಯಾಂಪ್ರೋ ಸಂಸ್ಥೆಯ ಸುವರ್ಣ ವರ್ಷಾಚರಣೆ
ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ತೆಂಕಿಲದ ವಿವೇಕಾನಂದ ಶಾಲಾ ಮೈದಾನದಲ್ಲಿ ಬಿಜೆಪಿಯಿಂದ ನಡೆಯಲಿರುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರು ನಗರದೊಳಗೆ ಟ್ರಾಕ್ಟರ್ ಸಂಚಾರ ನಿರ್ಬಂಧ ವಿರೋಧಿಸಿ ಬಾರಿ ಪ್ರತಿಭಟನೆ

ಕಳೆದ ಜನವರಿ 28ರಂದು ಬೆಳಗಾವಿ ಮತ್ತು ಹುಬ್ಬಳ್ಳಿ ಆಗಮಿಸಿದ್ದ ವೇಳೆಯಲ್ಲಿ ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗಕ್ಕೆ ಭೇಟಿ ನೀಡುವುದಾಗಿ ಅಮಿತ್ ಶಾ ಹೇಳಿದ್ದರು. ಕುಂದಗೋಳದಲ್ಲಿ ಬೂತ್ ಮಟ್ಟದ ವಿಜಯಸಂಕಲ್ಪ ಸಮಾವೇಶ, ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿದ್ದ ಅವರು ಅಂದು ಸಂಜೆ ಬೆಳಗಾವಿಯಲ್ಲಿ ಪಕ್ಷದ ಪದಾಧಿಕಾರಿಗಳ ಜೊತೆ ಪ್ರಮುಖ ಸಭೆ ನಡೆಸಿ ದೆಹಲಿಗೆ ವಾಪಸ್ ಆಗಿದ್ದರು.

ಪಕ್ಷಕ್ಕೆ ನೆಲೆ ಇಲ್ಲದ ಪ್ರಾಂತ್ಯಗಳನ್ನು ಕೇಂದ್ರೀಕರಿಸಿರುವುದಲ್ಲದೇ ಪ್ರಾಬಲ್ಯ ಇರುವ ಪ್ರಾಂತ್ಯವನ್ನೂ ಕಡೆಗಣಿಸದೇ ಎಲ್ಲ ಕಡೆ ವ್ಯವಸ್ಥಿತವಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಪ್ರಚಾರ ಮಾಡಲು ಹೈಕಮಾಂಡ್ ಮುಂದಾಗಿದೆ.

ಬಿಜೆಪಿಯ ಭದ್ರಕೋಟೆ ಎಂದೇ ದಕ್ಷಿಣ ಕನ್ನಡ ಜಿಲ್ಲೆಯನ್ನು ಕರೆಯಲಾಗುತ್ತಿದ್ದರೂ ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಅಮಿತ್ ಶಾ ತಂತ್ರ ಹೆಣೆಯುತ್ತಿದ್ದಾರೆ. ಮುಂದಿನ ಬಾರಿ ಪೂರ್ಣ ಬಹುಮತದ ಸರ್ಕಾರ ರಚನೆಗೆ ಪಣ ತೊಟ್ಟಿದ್ದಾರೆ.

ಮತ್ತೆ ಮೋದಿ ಆಗಮನ: ಫೆಬ್ರವರಿ 11ಕ್ಕೆ ಅಮಿತ್ ಶಾ ರಾಜ್ಯ ಪ್ರವಾಸ ಮಾಡಿದರೆ ಪ್ರಧಾನಿ ನರೇಂದ್ರಮೋದಿ ಅವರು 13ಕ್ಕೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023ಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ.

ಬಂಡಾಯಕ್ಕೆ ಇತಿಶ್ರೀ ಹಾಡಲು ಬಿಜೆಪಿ ಕಾರ್ಯತಂತ್ರ

ನಂತರ ಫೆಬ್ರವರಿ 27ರಂದು ಮತ್ತೊಮ್ಮೆ ನರೇಂದ್ರಮೋದಿ ರಾಜ್ಯಕ್ಕೆ ಆಗಮಿಸಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. 27ರಂದು ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಅಮಿತ್ ಶಾ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದ್ದು, ದಿನಾಂಕ ಹೊಂದಿಸುವ ಪ್ರಯತ್ನ ನಡೆಸಲಾಗುತ್ತಿದೆ.

ಇನ್ನು ಮೂರು ತಿಂಗಳು ರಾಜ್ಯದಲ್ಲಿ ಬಿಡುವಿಲ್ಲದ ಪ್ರಚಾರ ಕಾರ್ಯಗಳನ್ನು ಆಯೋಜಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಪ್ರಸಕ್ತ ತಿಂಗಳಿನಲ್ಲಿ ನಡೆಯಲಿರುವ ಬಜೆಟ್ ಅವೇಶನ ಮುಗಿಯುತ್ತಿದ್ದಂತೆ ಪೂರ್ಣ ಪ್ರಮಾಣದಲ್ಲಿ ಪ್ರಚಾರ ಕಾರ್ಯ ನಡೆಸಲಿದೆ.

ನಾಲ್ಕು ದಿಕ್ಕಿನಿಂದ ರಥಯಾತ್ರೆ, ಜಿಲ್ಲಾ ಮಟ್ಟದ ಮೋರ್ಚಾಗಳ ಸಮಾವೇಶ, ಬೃಹತ್ ಸಮಾವೇಶಗಳು ಜರುಗಲಿದ್ದು, ಪ್ರಮುಖ ಯಾತ್ರೆ ಮತ್ತು ಸಮಾವೇಶಗಳಿಗೆ ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಬಿಜೆಪಿ ಹೈಕಮಾಂಡ್‍ನ ಪ್ರಮುಖ ನಾಯಕರೆಲ್ಲ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ.

ಸದ್ಯದಲ್ಲೇ ಬಿಜೆಪಿ ಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಪ್ರಕಟಿಸಲಿದ್ದು, ಆಗ ಯಾರೆಲ್ಲಾ ನಾಯಕರು ರಾಜ್ಯಕ್ಕೆ ಆಗಮಿಸುತ್ತಾರೆ ಎಂಬುದು ಗೊತ್ತಾಗಲಿದೆ.

Amit Shah, visit, Puttur, Karnataka, Feb 11,

Articles You Might Like

Share This Article