ಬೆಂಗಳೂರು,ಜ.25- ಕೇಂದ್ರ ಗೃಹ ಸಚಿವ ಅಮಿತ್ ಇದೇ 27ರಂದು ರಾಜ್ಯಕ್ಕೆ ಆಗಮಿಸುತ್ತಿದ್ದು ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ನಡೆಯಲಿರುವ ಸರ್ಕಾರಿ ಮತ್ತು ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಪಕ್ಷದ ಚುನಾವಣಾ ಟಾಸ್ಕ್ ಪರಿಶೀಲನೆ ನಡೆಸಿ ರಾಜ್ಯ ನಾಯಕರಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಿದ್ದಾರೆ.
ಕಳೆದ ಬಾರಿ ಮಂಡ್ಯ ಮತ್ತು ಬೆಂಗಳೂರು ಪ್ರವಾಸಕ್ಕೆ ಆಗಮಿಸಿದ್ದ ವೇಳೆ ರಾಜ್ಯದ ನಾಯಕರಿಗೆ ಕೆಲವೊಂದು ಟಾಸ್ಕ್ ನೀಡಿದ್ದರು. ಅದರ ಪ್ರಗತಿ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಚುನಾವಣಾ ಸಿದ್ಧತೆಗೆ ಸಂಬಂಧಪಟ್ಟಂತೆ ಮಹತ್ವದ ಸಭೆ ನಡೆಸಿ ಪ್ರಚಾರ ತಂತ್ರದ ಕುರಿತು ಮಾತುಕತೆ ನಡೆಸಲಿದ್ದಾರೆ.
ಇದಕ್ಕಾಗಿ ಜ.27ರಂದು ಹುಬ್ಬಳ್ಳಿಯಲ್ಲೇ ವಾಸ್ತವ್ಯ ಹೂಡಲಿರುವ ಅವರು ವೇಳೆ ಪಕ್ಷದ ಪ್ರಮುಖ
ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ.
ಬಿಜೆಪಿಯಲ್ಲಿ ರಾಜಾಹುಲಿ ಬಿಎಸ್ವೈಗೆ ಇದೀಗ ಭಾರೀ ಬೇಡಿಕೆ
ಜನವರಿ 28ರಂದು ಬೆಳಗ್ಗೆ 11 ಗಂಟೆಗೆ ಕೆಎಲ್ಇ ಅಮೃತ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ, ಬಳಿಕ ಧಾರವಾಡದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ಶಾಸ್ತ್ರ ವಿಶ್ವವಿದ್ಯಾಲಯ ಕ್ಯಾಂಪಸ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿ ನಂತರ ಸರ್ಕಾರಿ ಕಾರ್ಯಕ್ರಮದ ನಂತರ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಕುಂದಗೋಳದಲ್ಲಿ ನಡೆಯಲಿರುವ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು, ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿಯಲ್ಲಿ ಸಂಜೆ 4 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದ್ದು, ಬೈಲಹೊಂಗಲ, ಕಿತ್ತೂರು, ಖಾನಾಪುರ ಕ್ಷೇತ್ರ ವ್ಯಾಪ್ತಿ ಕೇಂದ್ರೀಕರಿಸಿ ಆಯೋಜಿಸಿರುವ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಅಮಿತ್ ಶಾ ರಾಜ್ಯ ಪ್ರವಾಸದ ಹಿನ್ನಲೆಯಲ್ಲಿ ಕಾರ್ಯಕ್ರಮಗಳ ಸಿದ್ಧತಾ ಕಾರ್ಯದ ಕುರಿತು ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥಭವನದಲ್ಲಿ ಪದಾಕಾರಿಗಳ ಸಭೆ ನಡೆಸಲಾಗಿದೆ. ಸಭೆಯಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಮಾಡಿಕೊಂಡಿರುವ ಸಿದ್ಧತೆಗಳು ಮತ್ತು ಸಮಾವೇಶ ಆಯೋಜನೆ ಕುರಿತು ನಡೆದಿರುವ ತಯಾರಿಗಳ ಕುರಿತು ಪರಿಶೀಲನೆ ನಡೆಸಲಾಯಿತು.
ನ್ಯೂಜಿಲೆಂಡ್ ನೂತನ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಅಧಿಕಾರ ಸ್ವೀಕಾರ
ಮೋದಿ ಕಾರ್ಯಕ್ರಮದ ಯಶಸ್ಸಿನಂತೆ ಅಮಿತ್ ಶಾ ಕಾರ್ಯಕ್ರಮವನ್ನೂ ಯಶಸ್ವಿಗೊಳಿಸಲು ಸಭೆಯಲ್ಲಿ ನಿರ್ಧರಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಆಯ್ದ ಪ್ರಮುಖರು ಸಭೆಯನ್ನೂ ನಡೆಸಲಾಗಿದೆ.
ಅಮಿತ್ ಶಾ ಪ್ರವಾಸದ ವೇಳೆ ಆಯೋಜನೆ ಮಾಡಲಿರುವ ಕಾರ್ಯಕ್ರಮಗಳ ರೂಪುರೇಷೆ ಕುರಿತು ಚರ್ಚಿಸಿ ಕಾರ್ಯಕ್ರಮ ಆಯೋಜನೆಗೆ ಬೇಕಾದ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾ ಘಟಕಗಳಿಗೆ ಸೂಚನೆ ನೀಡಿದ್ದರು ಅದರಂತೆ ಸಭೆಯಲ್ಲಿ ತಯಾರಿಯ ಕುರಿತು ಪರಿಶೀಲನೆ ನಡೆಸಲಾಗಿದೆ.
ಕೆಎಲ್ಇ ಸಂಸ್ಥೆಯ ಬಿ.ಬಿ. ಭೂಮರಡ್ಡಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಅಮೃತ ಮಹೋತ್ಸವ ಹಾಗೂ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ 75ನೇ ವರ್ಷದ ಜನ್ಮದಿನದ ಅಂಗವಾಗಿ ಜ. 28ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು,ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ.
ಹಾಸನ ಜೆಡಿಎಸ್ ಟಿಕೆಟ್ಗೆ ಜಿದ್ಧಾಜಿದ್ದಿ
ಅಮೃತ ಮಹೋತ್ಸವದ ಅಂಗವಾಗಿ ಕಾಲೇಜಿನ ಆವರಣದಲ್ಲಿ 25 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗವನ್ನು ಉದ್ಘಾಟಿಸಲಿದ್ದು. ಜ.29ರಂದು ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮವಿದೆ.
Amit Shah, Visit, Hubballi, BJP, Leaders, Campaign,