ಮುಂಬೈ,ಮಾ.6-ಚಿತ್ರಿಕರಣದ ವೇಳೆ ಬಲ ಪಕ್ಕೆಲುಬಿನ ಸ್ನಾಯು ಸೆಳೆತಕ್ಕೆ ಗುರಿಯಾಗಿದ್ದ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಇದೀಗ ಚೇತರಿಸಿಕೊಂಡಿದ್ದು ಮುಂಬೈನಲ್ಲಿರುವ ತಮ್ಮ ಜಲ್ಸಾ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಹೈದ್ರಾಬಾದ್‍ನಲ್ಲಿ ನಡೆಯುತ್ತಿದ್ದ ಪ್ರಾಜೆಕ್ಟ್ ಕೆ ಚಿತ್ರಿಕರಣದಲ್ಲಿ 80 ವರ್ಷದ ಬಚ್ಚನ್ ಅವರು ಆಕ್ಷನ್ ದೃಶ್ಯದಲ್ಲಿ ಪಾಲ್ಗೊಂಡಿದ್ದಾಗ ಅವರ ಪಕ್ಕೆಲುಬಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಹೈದ್ರಾಬಾದ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ ನಂತರ ಅವರು ಚೇತರಿಸಿಕೊಂಡಿದ್ದಾರೆ.
ಹೈದ್ರಾಬಾದ್‍ನಲ್ಲಿ ಪಕ್ಕೆಲುಬಿನ ಸ್ನಾಯು ಸೆಳೆತಕ್ಕೆ ಒಳಗಾಗಿರುವ ವಿಷಯವನ್ನು ಸ್ವತಃ ಬಚ್ಚನ್ ಅವರೇ ತಮ್ಮ ಬ್ಲಾಗ್‍ನಲ್ಲಿ ಬರೆದುಕೊಂಡಿದ್ದಾರೆ. ಇದೀಗ ನಾನು ಯಾವುದೇ ಚಟುವಟಿಕೆಗಳಿಂದ ದೂರ ಉಳಿದು ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಅಮಿತಾಬ್ ಬಚ್ಚನ್ ಬಹಿರಂಗಪಡಿಸಿದ್ದಾರೆ.
ಭಾರತ ಸೇರಿ 6 ರಾಷ್ಟ್ರಗಳ ವೀಸಾ ಸರಳೀಕರಣಕ್ಕೆ ಮುಂದಾದ ರಷ್ಯಾ
ನಾನು ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ವಿಶ್ರಾಂತಿ ಪಡೆಯುತ್ತಿರುವುದರಿಂದ ಅಭಿಮಾನಿಗಳು ನಮ್ಮ ಮನೆ ಬಳಿಗೆ ಬರದೆ ಸಹಕರಿಸಬೇಕು ಎಂದು ಬಿಗ್‍ಬಿ ಮನವಿ ಮಾಡಿಕೊಂಡಿದ್ದಾರೆ.
ಪ್ರಾಜೆಕ್ಟ್ ಕೆ ಚಿತ್ರದಲ್ಲಿ ತೆಲುಗಿನ ಸೂಪರ್ ಸ್ಟಾರ್ ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಅವರು ಬಿಗ್‍ಬಿ ಅವರೊಂದಿಗೆ ನಟಿಸಿದ್ದು, ಬಹುನಿರೀಕ್ಷಿತ ಚಿತ್ರ ಮುಂದಿನ ವರ್ಷ ಬಿಡುಗಡೆಯಾಗುವ ನಿರೀಕ್ಷೆಯಿದೆ.
Amitabh Bachchan, Gets, Injured, During, Shoot,