‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮ ಪ್ರಶಂಸಿದ ಪ್ರಧಾನಿ ಮೋದಿ

Social Share

ಬೆಂಗಳೂರು, ಜುಲೈ 31 – ಸ್ವಾತಂತ್ರ್ಯ ಅಮೃತ‌‌ ಮಹೋತ್ಸವ ಹಿನ್ನೆಲೆಯಲ್ಲಿ ಕನ್ನಡ ಸಂಸ್ಕ್ರತಿ ಇಲಾಖೆ ಆಯೋಜಿಸಿರುವ ಸ್ವಾತಂತ್ರ್ಯ ಅಮೃತ‌‌ ಮಹೋತ್ಸವ ಹಿನ್ನೆಲೆಯಲ್ಲಿ ಕನ್ನಡ ಸಂಸ್ಕ್ರತಿ ಇಲಾಖೆ ಆಯೋಜಿಸಿರುವ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಉಲ್ಲೇಖಿಸಿದ ಮೋದಿ
ಅವರು, ಕರ್ನಾಟಕದಲ್ಲಿ ಅಮೃತ ಮಹೋತ್ಸವಕ್ಕೆ ಸಂಬಂಧಪಟ್ಟಂತೆ ಉತ್ತಮ ಕಾರ್ಯಕ್ರಮ ನಡೆಯುತ್ತಿದೆ ಎಂದು ಶ್ಲಾಘಿಸಿದರು.

ಅಮೃತ ಭಾರತಿಗೆ ಕನ್ನಡದ ಆರತಿ ಸಚಿವ ಸುನೀಲ್ ಕುಮಾರ್ ಕಲ್ಪನೆಯಲ್ಲಿ ಮೂಡಿ ಬಂದ ಕಾರ್ಯಕ್ರಮವಾಗಿದೆ.ಕಳೆದ ಮೂರು ತಿಂಗಳಿಂದ ರಾಜ್ಯದಲ್ಲಿ ಸಾಂಸ್ಕ್ರತಿಕ ಹಾಗೂ ಸ್ವಾತಂತ್ರ್ಯ ಹೋರಾಟದ ಅಲೆ ಎಬ್ಬಿಸುತ್ತಿರುವ ಈ ಕಾರ್ಯಕ್ರಮವನ್ನು ಇದಾಗಿದೆ.

ಸ್ವತಃ ಪ್ರಧಾನಿ ಅವರೇ ಈ ಕಾರ್ಯಕ್ರಮ ಕುರಿತು ತಮ್ಮ ಮನ್ ಕೀ ಬಾತ್ ನಲ್ಲಿ ಪ್ರಸಂಸಿರುವುದು ಅದರ ಮಹತ್ವವನ್ನು ಸಾರಿ ಹೇಳುವಂತಿದೆ. ಸ್ವಾತಂತ್ರ್ಯ ಹೋರಾಟ ನಡೆದ ನಾಡಿನ ಪ್ರಮುಖ 15 ಸ್ಥಳಗಳಲ್ಲಿ ನಾಟಕ, ಮೆರವಣಿಗೆ. ಸ್ಥಬ್ಧಚಿತ್ರ ಮತ್ತು ಸಾಕ್ಷ್ಯಚಿತ್ರಗಳ ಮೆರವಣಿಗೆ ಮಾಡಲಾಗುವುದು. ಆ.1 ರಿಂದ 8 ರವರೆಗೆ ರಾಜ್ಯದ ನಾಲ್ಕು ಕಂದಾಯ ಜಿಲ್ಲೆಗಳಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ರಥಯಾತ್ರೆ ನಡೆಸಲಾಗುವುದು. 31 ಜಿಲ್ಲೆಗಳಲ್ಲೂ ಸಂಚರಿಸುವ ರಥಯಾತ್ರೆ ಬೆಂಗಳೂರಿಗೆ ತಲುಪಲಿದೆ.

ಆ.9 ರಂದು ಜಿಲ್ಲೆಗಳಿಂದ ಹೊರಟ ರಥಯಾತ್ರೆ ನಗರವನ್ನು ತಲುಪಲಿದ್ದು ಆ.9 ರಿಂ 11 ರವರೆಗೆ ನಗರದಲ್ಲಿ ಮಹೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ. ರಾಜಧಾನಿಯಲ್ಲಿ ಭಾರೀ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕಾಗಿ ಹಲವು ಸಮಿತಿಗಳನ್ನೂ ರಚಿಸಲಾಗಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆ.9 ರಂದು ರಾಜ್ಯದಲ್ಲಿ ಎಲ್ಲರ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸುವ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕೆ ಸಾಕಷ್ಟುಪೂರ್ವ ತಯಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

Articles You Might Like

Share This Article