ಬೆಂಗಳೂರು, ಸೆ.17- ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ವಿಧಾನಸಭೆ ಉಪಾಧ್ಯಕ್ಷ ಆನಂದ್ ಮಾಮನಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಪ್ರಸ್ತುತ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಅವರ ಆರೋಗ್ಯ ವಿಚಾರಿಸಿದರು.
ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಸುಧಾರಣೆ ಕಂಡ ನಂತರ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಎರಡು ದಿನಗಳಿಂದ ಮಾಮನಿ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.