ಬೆಂಗಳೂರು, ಡಿ.20- ನಿರ್ಮಾಣ ಹಂತದ ಕಟ್ಟಡದಲ್ಲಿ ಅಂದರ್- ಬಾಹರ್ ಜೂಜಾಟದಲ್ಲಿ ತೊಡಗಿದ್ದ 16 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 8.10 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಮಾರುತಿನಗರ, ಪಾಪಣ್ಣ ಬಡಾವಣೆ ಮುಖ್ಯರಸ್ತೆ, ಕೋಗಿಲು ಬಳಿಯ ನಿರ್ಮಾಣ ಹಂತದ ಕಟ್ಟಡದ ಮೂರನೇ ಮಹಡಿಯಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟ್ ಎಲೆಗಳಿಂದ ಅಂದರ್-ಬಾಹರ್ ಎಂಬ ಜೂಜಾಟ ಆಡುತ್ತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ದಾಳಿ ಮಾಡಿ ಜೂಜಾಟದಲ್ಲಿ ತೊಡಗಿದ್ದ 16 ಮಂದಿಯನ್ನು ಬಂಧಿಸಿ ಪಣಕ್ಕಿಟ್ಟಿದ್ದ 8.10 ಲಕ್ಷ ರೂ. ನಗದು ಹಾಗೂ ಟಾರ್ಪಲ್, 52 ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಬಾಂಗ್ಲಾದೇಶಿಗಳಿಗೆ ನಕಲಿ ದಾಖಲಾತಿ ಸೃಷ್ಟಿಗೆ ನೆರವು ನೀಡಿದ ಶಾಸಕರ ವಿರುದ್ಧ ಕೇಸ್
ಆರೋಪಿಗಳ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದ್ದಾರೆ.
ಈ ಕಾರ್ಯಾಚರಣೆಯನ್ನು ಕೇಂದ್ರ ಅಪರಾಧ ವಿಭಾಗದ ವಿಶೇಷ ವಿಚಾರಣಾ ದಳದ ಅಧಿಕಾರಿ ಹಾಗೂ ಸಿಬ್ಬಂದಿ ಯಶಸ್ವಿಯಾಗಿ ನಡೆಸಿರುತ್ತಾರೆ.
AndarBahar, 16 arrested, CCB police,