ಬೆಂಗಳೂರು,ಮಾ.17- ಆಂಧ್ರಪ್ರದೇಶದಿಂದ ನಗರಕ್ಕೆ ಗಾಂಜಾತಂದು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿ 6ಕೆಜಿ ಗಾಂಜಾ, ಮೊಬೈಲ್ ಹಾಗೂ ಇನ್ನಿತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕೆಜಿಹಳ್ಳಿಯ ಅರೇಬಿಕ್ ಕಾಲೇಜು ಸಮೀಪದ ನಿವಾಸಿ ಇಮ್ರಾನ್ ಪಾಷ(36) ಬಂಧಿತ ಆರೋಪಿ. ಮುನಿಕೃಷ್ಣಪ್ಪ ಲೇಔಟ್ 3ನೇ ಕ್ರಾಸ್, 1ನೇ ಮುಖ್ಯರಸ್ತೆ, ಬಲಮುರಿ ಗಣಪತಿ ದೇವಸ್ಥಾನ ಸಮೀಪದಲ್ಲಿ ವ್ಯಕ್ತಿಯೊಬ್ಬ ಗಾಂಜಾ ಮಾರಾಟ ಮಾಡುತ್ತಿದ್ದಾನೆಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.
ಚುನಾವಣಾ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ RSS ಮತ್ತಷ್ಟು ಸಕ್ರಿಯ
ಇನ್‍ಸ್ಪೆಕ್ಟರ್ ಶಿವಪ್ರಸಾದ್ ಅವರು ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾವಿಸಿ ಆರೋಪಿಯನ್ನು ಬಂಧಿಸಿ 6 ಕೆಜಿ 380 ಗ್ರಾಂ ಗಾಂಜಾ, ಮೊಬೈಲ್, ಕವರ್, ಬ್ಯಾಗ್, ಚಿಕ್ಕ ಚಿಕ್ಕ ಪೊಟ್ಟಣಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ಆಂಧ್ರದ ವ್ಯಕ್ತಿಯೊಬ್ಬನಿಂದ ಗಾಂಜಾತೆಗೆದುಕೊಂಡು ಬಂದು ಮಾರಾಟ ಮಾಡುತ್ತಿದ್ದುದಾಗಿ ತಿಳಿಸಿದ್ದಾನೆ. ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Andhra, ganja, selling, Arrested,