Sunday, September 15, 2024
Homeರಾಷ್ಟ್ರೀಯ | Nationalವರುಣಾರ್ಭಟಕ್ಕೆ ನಲುಗಿದ ಆಂಧ್ರ, ತೆಲಂಗಾಣ : 25ಕ್ಕೂ ಹೆಚ್ಚು ಮಂದಿ ಸಾವು

ವರುಣಾರ್ಭಟಕ್ಕೆ ನಲುಗಿದ ಆಂಧ್ರ, ತೆಲಂಗಾಣ : 25ಕ್ಕೂ ಹೆಚ್ಚು ಮಂದಿ ಸಾವು

Andhra, Telangana rain fury: 25 dead, schools shut, 140 trains cancelled

ಅಮರಾವತಿ,ಸೆ.2- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಸತತ 2ನೇ ದಿನವೂ ವರುಣನ ಆರ್ಭಟ ಮುಂದುವರೆದು ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.ರಸ್ತೆ ಮತ್ತು ರೈಲು ಸಂಚಾರಕ್ಕೆ ಅಡಚಣೆಯುಂಟಾಗಿದೆ. ಹಲವೆಡೆ ಮಳೆ ಸಂಬಂಧಿ ಅವಘಡಗಳು ಸಂಭವಿಸಿ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

ಉಭಯ ರಾಜ್ಯಗಳ ನದಿಗಳು ಮೈದುಂಬಿ ಹರಿಯುತ್ತಿವೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು ಪ್ರವಾಹ ಪೀಡಿತ ಪ್ರದೇಶಗಳಿಂದ ಸಾವಿರಾರು ನಿವಾಸಿಗಳನ್ನು ರಕ್ಷಿಸಿ ಪರಿಹಾರ ಕೇಂದ್ರಗಳಿಗೆ ರವಾನಿಸಿವೆ.

ತೆಲಂಗಾಣದಲ್ಲಿ ಹೈದರಾಬಾದ್‌ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಸುರಿದಿದ್ದು, ನಾಲ್ಕು ರೈಲುಗಳನ್ನು ಭಾಗಶಃ ರದ್ದುಗೊಂಡಿದ್ದು, 99 ರೈಲುಗಳನ್ನು ರದ್ದುಗೊಂಡಿವೆ. ದಕ್ಷಿಣ ಮಧ್ಯ ರೈಲ್ವೆ ಜಾಲದ ಅನೇಕ ಸ್ಥಳಗಳಲ್ಲಿ ಭಾರೀ ಮಳೆ ಮತ್ತು ಹಳಿಗಳ ಮೇಲೆ ನೀರು ನಿಂತಿದ್ದರಿಂದ 54 ರೈಲುಗಳ ಮಾರ್ಗ ಬದಲಿಸಲಾಗಿದೆ ಎಂದು ಎಸ್‌‍ಸಿಆರ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡೂ ರಾಜ್ಯಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ತಡೆ ಪಡೆಗಳು ಪ್ರವಾಹ ಪ್ರದೇಶಗಳಿಂದ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ, ಶಿಬಿರಗಳಿಗೆ ಸ್ಥಳಾಂತರಿಸಿದ್ದಾರೆ.ಈ ನಡುವೆ ಪ್ರಧಾನಮಂತ್ರಿ ನರೇಂದ್ರಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಸಿಎಂ ಎ.ರೇವಂತ್‌ ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಮಳೆ ಮತ್ತು ಪ್ರವಾಹವನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಈ ನಡುವೆ ಪ್ರವಾಹ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರೆಫ್‌) 26 ತಂಡಗಳನ್ನು ನಿಯೋಜಿಲಾಗಿದೆ. ಈ ಪೈಕಿ ಈಗಾಗಲೇ ಎರಡು ರಾಜ್ಯಗಳಲ್ಲಿ 12 ತಂಡಗಳನ್ನು ಕಾರ್ಯಾಚರಣೆ ಕೈಗೊಂಡಿದ್ದು, ಇನ್ನೂ 14 ತಂಡಗಳನ್ನು ಕಳುಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.14 ತಂಡಗಳ ಪೈಕಿ 8 ತಂಡಗಳನ್ನು ದೇಶದ ವಿವಿಧ ಸ್ಥಳಗಳಿಂದ ವಿಮಾನದಲ್ಲಿ ಕರೆತರಲಾಗುತ್ತಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಈವರೆಗೆ ಕನಿಷ್ಠ 25 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣದಲ್ಲಿ ಈವರೆಗೂ 17,000ಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಲಾಗಿದೆ. ಮುಖ್ಯಮಮತ್ರಿ ರೇವಂತ್‌ ರೆಡ್ಡಿ ಅವರು ತುರ್ತು ಸಭೆ ನಡೆಸಿ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ. ಮುಳುಗಡೆಗೊಂಡಿರುವ ಪ್ರದೇಶಗಳಲ್ಲಿ ಪರಿಹಾರ ಕ್ರಮಗಳ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಮಹಬೂಬಾಬಾದ್‌ ಮತ್ತು ಖಮಂ ಜಿಲ್ಲೆಗಳಲ್ಲಿ ಭಾನುವಾರ ಪ್ರತ್ಯೇಕ ಮಳೆ ಸಂಬಂಧಿತ ಘಟನೆಗಳಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಕೊಚ್ಚಿಹೋಗಿದ್ದಾರೆ.ಕೆಸಮುದ್ರ ಮಂಡಲದ ತಲ್ಲಪುಸಪಲ್ಲಿ ಗ್ರಾಮದ ಹೊರವಲಯದಲ್ಲಿ ಭಾನುವಾರ ಸುರಿದ ಭಾರೀ ಮಳೆಗೆ ರೈಲು ಹಳಿ ಕೊಚ್ಚಿ ಹೋಗಿದ್ದು, ಇದರಿಂದ ಕೇಸಮುದ್ರ ಮತ್ತು ಮಹಬೂಬಾಬಾದ್‌ ರೈಲು ನಿಲ್ದಾಣಗಳಲ್ಲಿ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಅಂತೆಯೇ ವಿಜಯವಾಡ-ವಾರಂಗಲ್‌ ಮಾರ್ಗದಲ್ಲಿ ರೈಲು ಸಂಚಾರದ ಮೇಲೂ ಪರಿಣಾಮ ಬೀರಿದೆ. ವಿಜಯವಾಡ-ಖಮಂ ಮಾರ್ಗದಲ್ಲಿ ರೈಲು ಸಂಚಾರವನ್ನು ಸ್ಥಹಗಿತಗೊಳಿಸಲಾಗಿದೆ. ಮಳೆಯ ಪರಿಣಾಮ ತೆಲಂಗಾಣ ಸರ್ಕಾರವು ಸೋಮವಾರ ರಾಜ್ಯದಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.

ವಾರಂಗಲ್‌ ಜಿಲ್ಲೆಯಲ್ಲಿ ಶನಿವಾರದಿಂದಲೂ ಭಾರೀ ಮಳೆಯಾಗುತ್ತಿದ್ದು, ಕೆರೆ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಮಹಬೂಬಾಬಾದ್‌ ಜಿಲ್ಲೆಯ ಕುರವಿ ಮಂಡಲದ ನಲ್ಲೇಲ ಗ್ರಾಮ ಜಲಾವೃತಗೊಂಡಿದೆ. ಎರಡು ದಶಕಗಳಲ್ಲಿ ಗ್ರಾಮದಲ್ಲಿ ಇಂತಹ ಭೀಕರ ಪ್ರವಾಹ ಉಂಟಾಗಿರುವುದು ಇದೇ ಮೊದಲು ಎನ್ನಲಾಗಿದೆ.

ತೆಲಂಗಾಣದಲ್ಲಿ ರೆಡ್‌ ಅಲರ್ಟ್ :
ತೆಲಂಗಾಣದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಪೂರ್ವ ಮತ್ತು ಈಶಾನ್ಯ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಮತ್ತು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಹೈದರಾಬಾದ್‌ನಲ್ಲಿಂದು ಮತ್ತು ನಾಳೆ ಸಾಧಾರಣ ಮಳೆ ಮತ್ತು ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಶಾಲೆಗಳಿಗೆ ರಜೆ:
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಹೈದರಾಬಾದ್‌ ಜಿಲ್ಲೆಯ ಎಲ್ಲ ಶಾಲೆಗಳಿಗೆ ಇಂದು (ಸೆಪ್ಟೆಂಬರ್‌ 2) ರಜೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡುವ ಕುರಿತು ನಿರ್ಧಾರ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಆದಿಲಾಬಾದ್‌, ನಿಜಾಮಾಬಾದ್‌, ರಾಜಣ್ಣ ಸಿರ್ಸಿಲ್ಲಾ, ಯಾದಾದ್ರಿ ಭುವನಗಿರಿ, ವಿಕಾರಾಬಾದ್‌, ಸಂಗಾರೆಡ್ಡಿ, ಕಾಮರೆಡ್ಡಿ, ಮಹಬೂಬನಗರ ಮುಂತಾದೆಡೆ ಇಂದು ಬೆಳಗ್ಗೆ 8.30ವರೆಗೂ ಅತೀ ಹೆಚ್ಚು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ನೀಡಿದೆ.

ಸಿಎಂ ಚಂದ್ರಬಾಬು ನಾಯ್ಡು ಮಳೆ ಬಾಧಿತ ಪ್ರದೇಶಗಳಿಗೆ ರಾತ್ರಿ ದೋಣಿ ಮೂಲಕ ತೆರಳಿ ನಿವಾಸಿಗಳಿಗೆ ಧೈರ್ಯ ತುಂಬಿದ್ದಾರೆ. ಸರ್ಕಾರ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದ್ದಾರೆ.

RELATED ARTICLES

Latest News