ಮೊಟ್ಟೆ ಬೆಲೆ ತಾರತಮ್ಯ ಸರಿಪಡಿಸುವಂತೆ ಒತ್ತಾಯ

Social Share

ಬೆಂಗಳೂರು,ಫೆ.7-ಮೊಟ್ಟೆ ಬೆಲೆ ಏರಿಕೆಯಿಂದ ಆಗುತ್ತಿರುವ ಅನ್ಯಾಯನ್ನು ಸರಿಪಡಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಸಂಘ ಸರ್ಕಾರವನ್ನು ಒತ್ತಾಯಿಸಿದೆ. ಮಾರುಕಟ್ಟೆಯಲ್ಲಿ ಮೊಟ್ಟೆ ಬೆಲೆ 6 ರೂ.ಗಳಿಗೆ ಏರಿಕೆಯಾಗಿದೆ. ಸರ್ಕಾರ ಒಂದು ಮೊಟ್ಟೆ ಖರೀದಿಗೆ ಕೇವಲ 5 ರೂ. ನೀಡುತ್ತಿದೆ.
ಇದು ಅಂಗನವಾಡಿ ಕಾರ್ಯಕರ್ತೆಯರ ಜೇಬಿಗೆ ಕತ್ತರಿ ಹಾಕಿದೆ. ನಮಗೆ ಆಗುತ್ತಿರುವ ನಷ್ಟವನ್ನು ಭರಿಸಿಕೊಡಬೇಕು ಎಂದು ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಜಯಮ್ಮ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ 62 ಸಾವಿರ ಅಂಗನವಾಡಿ ಕೇಂದ್ರಗಳಿವೆ. ಎಲ್ಲಾ ಕೇಂದ್ರಗಳಲ್ಲೂ ಮೊಟ್ಟೆ ಬೆಲೆಯಲ್ಲಿ ಏರುಪಾರಾಗಿದೆ. ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪ್ರತಿ ತಿಂಗಳು 25 ಮೊಟ್ಟೆ ನೀಡಬೇಕು. 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಪ್ರತಿ ತಿಂಗಳು 8 ಮೊಟ್ಟೆ ನೀಡಬೇಕಿದೆ.
ಸರ್ಕಾರ ಮೊಟ್ಟೆ ಖರೀದಿಗೆ ಐದು ರೂ.ಗಳನ್ನು ನೀಡುತ್ತಿದೆ. ಇದೀಗ ಮಾರುಕಟ್ಟೆಯಲ್ಲಿ ಮೊಟ್ಟೆ ಬೆಲೆ 6 ರೂ.ಗಳಿಗೆ ಏರಿಕೆಯಾಗಿದೆ. ಒಂದು ರೂ.ಹೆಚ್ಚುವರಿ ಹಣವನ್ನು ಅಂಗನವಾಡಿ ಕಾರ್ಯಕರ್ತೆಯರೇ ಭರಿಸುವಂತಾಗಿದೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಹೊರೆಯಾಗುತ್ತಿರುವ ಈ ಸಮಸ್ಯೆಯನ್ನು ಸರ್ಕಾರ ಬಗೆಹರಿಸಬೇಕು ಎಂದು ಜಯಮ್ಮ ಮನವಿ ಮಾಡಿಕೊಂಡಿದ್ದಾರೆ.

Articles You Might Like

Share This Article