ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಬದ್ಧ

Social Share

ಬೆಂಗಳೂರು,ಸೆ.16- ಕೇಂದ್ರ ಸರ್ಕಾರ ಸಮ್ಮತ್ತಿಸಿದರೆ ರಾಜ್ಯದಲ್ಲಿರುವ ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಆಚಾರ್ ಹಾಲಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಪ್ರಶ್ನೋತ್ತರ ಅವಯಲ್ಲಿ ಶಾಸಕ ಹಾಲಪ್ಪ ಹರತಾಳ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 3341 ಮಿನಿ ಅಂಗನವಾಡಿ ಕೇಂದ್ರಗಳಿವೆ. ಇವುಗಳಲ್ಲಿ 1002 ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಾರ್ಗಸೂಚಿಗಳ ಪ್ರಕಾರ ಕೇಂದ್ರ ಸರ್ಕಾರವೇ ಇವುಗಳನ್ನು ಮೇಲ್ದರ್ಜೆ ಗೇರಿಸಬೇಕು. ಅವರು ಅನುಮತಿಸಿದರೆ ನಾವು ಸಿದ್ಧರಿದ್ದೇವೆ ಎಂದು ಹೇಳಿದರು.

ಮಿನಿ ಅಂಗನವಾಡಿ ಕೇಂದ್ರ ಗಳನ್ನು ಮೇಲ್ದರ್ಜೆ ಗೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈ ಬಗ್ಗೆಯೂ ಕೇಂದ್ರಕ್ಕೂ ಮನವರಿಕೆ ಮಾಡಿಕೊಟ್ಟಿದ್ದೇವೆ. ಪತ್ರ ವ್ಯವಹಾರವೂ ಕೂಡ ನಡೆದಿದೆ. ಕೇಂದ್ರದಿಂದ ನಮಗೆ ಸಾಕಾರಾತ್ಮಕ ಸ್ಪಂದನೆ ಸಿಗುವ ಸಂಭವವಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಅಂಗನವಾಗಿ ಕೇಂದ್ರಗಳನ್ನು ಮೇಲ್ದರ್ಜೆಗೇರಿ ಸಬೇಕಾದರೆ ಕೇಂದ್ರದ ಅನುಮತಿ ಅಗತ್ಯ. ಕೇಂದ್ರ ಸರ್ಕಾರ ಶೇ.60 ಹಾಗೂ ರಾಜ್ಯ ಸರ್ಕಾರ ಶೇ.40ರಷ್ಟು ಸಹಾಯಧನ ಒದಗಿಸುತ್ತದೆ. ರಾಜ್ಯದಲ್ಲಿ ಹೊಸದಾಗಿ ಅಂಗನವಾಡಿ ಕೇಂದ್ರಗಳನ್ನೂ ಸಹ ತೆರೆಯುತ್ತಿದ್ದೇವೆ. ಅವುಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದೇವೆ ಎಂದು ಹೇಳಿದರು.

ಅಂಗನವಾಡಿ ಕೇಂದ್ರಗಳನ್ನು ಶಿಶು ಅಭಿವೃದ್ಧಿ ಯೋಜನೆಯಡಿ ಜನಸಂಖ್ಯೆಗನುಗುಣವಾಗಿ ಮಂಜೂರು ಮಾಡಲಾಗುತ್ತದೆ. 150ರಿಂದ 400 ಜನಸಂಖ್ಯೆ ಇರುವ ಕಡೆ ಮಿನಿ ಅಂಗನವಾಡಿ ಕೇಂದ್ರ, 400ರಿಂದ 800 ಜನ ಇರುವ ಕಡೆ ಮುಖ್ಯ ಅಂಗನವಾಡಿ ಕೇಂದ್ರಗಳನ್ನು ತೆರೆಯಲಾಗುತ್ತದೆ.

ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಅಂಗನವಾಡಿ ಮಾದರಿಯಲ್ಲಿ ವೇತನ ನೀಡಲು ಅವಕಾಶ ಇರುವುದಿಲ್ಲ. ಈ ಸಾಲಿನ ಬಜೆಟ್‍ನಲ್ಲಿ ಅಂಗನವಾಡಿಗಳಿಗೆ ಹೊಸ ಕಟ್ಟಡ, ಅಂಗನವಾಡಿ ಕಾರ್ಯಕರ್ತೆಯರು , ಸಹಾಯಕಿಯರಿಗೆ ಗೌರಧನವನ್ನು ನಮ್ಮ ಸರ್ಕಾರ ಹೆಚ್ಚಿಸಿದೆ ಎಂದು ತಿಳಿಸಿದರು.

Articles You Might Like

Share This Article